Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 1 ಏಪ್ರಿಲ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆ ಕಂಡುಬರಲಿದೆ. ಮನೆಗೆ ಪ್ರೀತಿ ಪಾತ್ರರ ಆಗಮನವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಅಡಚಣೆಗಳು ಕಂಡುಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ತಾಳ್ಮೆಯಿರಲಿ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಪ್ರಾಮಾಣಿಕತೆಗೆ ತಕ್ಕ ಫಲ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರಿಗೆ ದೇವತಾ ಕಾರ್ಯಗಳಿಂದ ನೆಮ್ಮದಿ ಸಿಗುವುದು.

ಕರ್ಕಟಕ: ನೂತನ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಮಕ್ಕಳ ವಿದ್ಯಾಭ್ಯಾಸ ನಿಮಿತ್ತ ಖರ್ಚು ವೆಚ್ಚಗಳಾದೀತು. ಆದಾಯಕ್ಕೆ ವಿವಿಧ ಮೂಲಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ವಿಶೇಷ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಬಹುದಿನಗಳ ನಂತರ ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿರಲಿ. ಸಾಲ ಮರುಪಾವತಿ ಚಿಂತೆ ಕಾಡಲಿದೆ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಸಂತಾನ ಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದೀರಿ. ನಿರುದ್ಯೋಗಿಗಳ ಉದ್ಯೋಗನ್ವೇಷಣೆ ಮುಂದುವರಿಯಲಿದೆ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಅಗತ್ಯ. ದೇವತಾ ಪ್ರಾರ್ಥನೆ ಮರೆಯದಿರಿ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವೈಯಕ್ತಿಕ ವಿಚಾರಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಇಷ್ಟಭೋಜನ ಮಾಡುವ ಯೋಗ.

ಮಕರ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರುವುದು. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆ. ಮಕ್ಕಳಿಂದ ಸಂತೋಷ ಸಿಗಲಿದೆ.

ಕುಂಭ: ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ.  ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಮೀನ: ವಿಶೇಷವಾದ ವ್ಯಕ್ತಿಗಳು ಇಂದು ನಿಮ್ಮ ಜೀವನ ಪ್ರವೇಶಿಸಲಿದ್ದಾರೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಹಿರಿಯರಿಗೆ ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ