ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 2 ಏಪ್ರಿಲ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೌಟುಂಬಿಕವಾಗಿ ಇಲ್ಲಸಲ್ಲದ ಕಿರಿ ಕಿರಿಗಳನ್ನು ಮರೆತು ಸಂತೋಷವಾಗಿ ಕಾಲಕಳೆಯಿರಿ. ನಿಮ್ಮ ಬಗ್ಗೆ ದೋಷಾರೋಪಣೆ ಮಾಡುವವರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ. ಹೊಸ ವಸ್ತ್ರ, ಭೋಜನ ಮಾಡುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಕೆಟ್ಟೀತು.

ಮಿಥುನ: ಹೊಸ ಕೆಲಸಗಳನ್ನು ಆರಂಭಿಸಲು ಇದು ಸಕಾಲ. ಹಠ, ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ.

ಕರ್ಕಟಕ: ಗುರುಹಿರಿಯರ ಸಲಹೆಗಳನ್ನು ಪಾಲಿಸುವುದರಿಂದ ಕೆಲಸದಲ್ಲಿ ಮುನ್ನಡೆ ಕಂಡುಬರಲಿದೆ. ದೈಹಿಕವಾಗಿ ಶ್ರಮದಾಯಕ ಕೆಲಸಗಳು ಕಂಡುಬರಲಿದೆ. ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ಚಿಂತೆ ಬೇಡ.

ಸಿಂಹ: ಸಾಂಸಾರಿಕವಾಗಿ ಸುಖ ಸಮೃದ್ಧಿಯ ದಿನಗಳಿವು. ಸಂಗಾತಿಯ ಸಂತೋಷಕ್ಕಾಗಿ ಕೆಲವೊಂದು ತ್ಯಾಗ ಮಾಡಲಿದ್ದೀರಿ. ಉದ್ಯೋಗ ವ್ಯವಹಾರದಲ್ಲಿ ಉನ್ನತಿಯ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕನ್ಯಾ: ಕೌಟುಂಬಿಕ ವಿಚಾರದಲ್ಲಿ ತಾಳ್ಮೆ, ಸಹನೆ ಅಗತ್ಯ. ಬಹುದಿನಗಳ ನಂತರ ಪ್ರೀತಿ ಪಾತ್ರರೊಂದಿಗೆ ದಿನ ಕಳೆಯುವ ಯೋಗ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಸಹೋದರ ಸಮಾನರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ತುಲಾ: ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಕೆಲವೊಮ್ಮೆ ತೊಂದರೆಯಾಗಿ ಕಾಡಬಹುದು. ಎಚ್ಚರಿಕೆಯಿಂದ ವ್ಯವಹರಿಸಿ. ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬದವರ ಸಹಕಾರವಿರಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ನೆಂಟರಿಷ್ಟರ ಭೇಟಿಯಾಗಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಮಕ್ಕಳ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಿ ಗೋಜಲು ಮಾಡಿಕೊಳ್ಳಬೇಡಿ. ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಸಂಘರ್ಷಗಳಾದೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ತಾಳ್ಮೆಯಿರಲಿ.

ಮಕರ: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಪರರಿಗೆ ಸಹಾಯ ಮಾಡುವ ಮೊದಲು ಪೂರ್ವಾಪರ ತಿಳಿದುಕೊಳ್ಳಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಅರ್ಧಕ್ಕೇ ನಿಂತ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಹೊಸದಾಗಿ ಮದುವೆಯಾಗಿದ್ದ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಕೆಲಸ ಕಾರ್ಯಗಳಲ್ಲಿ ಉನ್ನತಿಯ ಯೋಗ. ನಿಮ್ಮ ನಡೆ ನುಡಿಗಳಿಂದ ಇತರರನ್ನು ಆಕರ್ಷಿಸಲಿದ್ದೀರಿ. ವಾಹನ ಸಂಚಾರದಲ್ಲಿ ಜಾಗರೂಕತೆ ಅಗತ್ಯ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳನ್ನು ಬದಿಗಿಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಮುಂದಿನ ಸುದ್ದಿ
Show comments