Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 7 ಏಪ್ರಿಲ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಯೋಜನೆಗಳನ್ನು ಹಮ್ಮಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸಣ್ಣ ವ್ಯತ್ಯಯವಾದೀತು. ಆದರೆ ಉಪೇಕ್ಷೆ ಬೇಡ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಮಾತೃಸಮಾನರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಕಾರ ಸಿಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾದೀತು. ತಾಳ್ಮೆ, ಸಂಯಮ ಅಗತ್ಯ.

ಮಿಥುನ: ನೀವು ನಿರೀಕ್ಷೆಯೇ ಮಾಡಿರದ ಘಟನೆಗಳು, ವಿಚಾರಘಳು ಇಂದು ನಿಮ್ಮ ಜೀವನದಲ್ಲಿ ನಡೆದುಹೋಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಅಭಿವೃದ್ಧಿ ಕಂಡುಬರುವುದು.

ಕರ್ಕಟಕ: ಮಕ್ಕಳ ಭವಿಷ್ಯದ ನಿಮಿತ್ತ ಮಹತ್ವದ ಜವಾಬ್ಧಾರಿ ಹೆಗರಲಿಗೇರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಸಂಗಾತಿಯ ಕೆಲವೊಂದು ಸಲಹೆಗಳು ಉಪಯೋಗಕ್ಕೆ ಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಹೆಚ್ಚಿನ ಧನಾರ್ಜನೆಗಾಗಿ ನಾನಾ ದಾರಿಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಕನ್ಯಾ: ಕೌಟುಂಬಿಕವಾಗಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳಿಂದ ಸಂತೋಷ ನೀಡಲಿದ್ದೀರಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ತುಲಾ: ವೃತ್ತಿರಂಗದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ನೀವು ಮಾಡುವ ಪ್ರಯತ್ನಕ್ಕೆ ಸಕಾರಾತ್ಮಕ ಫಲ ದೊರೆಯಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ವೃಶ್ಚಿಕ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಉತ್ತಮ ಧನಾರ್ಜನೆಯಾಗಲಿದ್ದು, ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ನಿರುದ್ಯೋಗಿಗಳಿಗೆ ಯೋಗ್ಯತೆಗೆ ತಕ್ಕ ಉದ್ಯೋಗ ಸಿಗಲಿದೆ.

ಧನು: ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ತಕ್ಕ ಫಲ ಕಂಡುಬರಲಿದೆ. ವಿಶೇಷವಾದ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕಂಡುಬರಲಿದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗದೇ ನಿರಾಸೆಯಾದೀತು. ಕ್ರಿಯಾತ್ಮಕಕವಾಗಿ ಯೋಚಿಸಬೇಕಾಗುತ್ತದೆ. ಹಳೆಯ ಮಿತ್ರರ ಭೇಟಿ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ.

ಕುಂಭ: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ.

ಮೀನ: ಹಣಕಾಸಿನ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ