ಮೇಷ: ಹಳೆಯ ಮಿತ್ರರ ಸಮಾಗಮವಾಗಲಿದ್ದು, ಮನಸ್ಸಿಗೆ ಖುಷಿಯಾಗಲಿದೆ. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ತಾಳ್ಮೆಯಿರಲಿ.
ವೃಷಭ: ನಿರೀಕ್ಷಿತ ಸ್ಥಾನ ಮಾನ ಸಿಗದೇ ನಿರಾಸೆಯಾದೀತು. ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬಂದೀತು. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಮಿಥುನ: ಕೃಷಿ ವ್ಯವಹಾರಗಳಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆಯ ಯೋಗ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿ ಹೆಗಲಿಗೇರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.
ಕರ್ಕಟಕ: ಕುಟುಂಬದ ಶ್ರೇಯೋಭಿವೃದ್ಧಿಗೆ ಹೊಸ ತೀರ್ಮಾನಗಳನ್ನು ಕೈಗೊಳ್ಳಲಿದ್ದೀರಿ. ಇಷ್ಟಭೋಜನ ಮಾಡುವ ಯೋಗವಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.
ಸಿಂಹ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ಆದರೆ ಯಾರಿಗೂ ಸಾಲ ಕೊಡಲು ಹೋಗಬೇಡಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ ಕೇಳಿಬರಲಿದೆ.
ಕನ್ಯಾ: ದೇವತಾ ಸಂದರ್ಶನ ಯೋಗವಿದ್ದು, ಬಹಳ ದಿನಗಳ ಹರಕೆ ತೀರಿಸಲಿದ್ದೀರಿ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕೌಟುಂಬಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ.
ತುಲಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.
ವೃಶ್ಚಿಕ: ನಿಮ್ಮ ಭವಿಷ್ಯಕ್ಕೆ ಪೂರಕವಾದ ಕೆಲವೊಂದು ಕೆಲಸಗಳನ್ನು ಮಾಡುವಾಗ ಅಡೆತಡೆಗಳು ಬಂದೀತು. ಉದ್ಯೋಗದಲ್ಲಿ ಅಧಿಕ ಶ್ರಮವಿದ್ದರೂ ನೆಮ್ಮದಿಯಿರಲಿದೆ. ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು.
ಧನು: ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ, ಸ್ಥಾನ ಮಾನಗಳು ಹೆಚ್ಚಲಿವೆ. ನೆಂಟರಿಷ್ಟರ ಭೇಟಿಯಾಗಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು.
ಮಕರ: ಎಷ್ಟೋ ದಿನಗಳಿಂದ ಬಾಕಿಯಾಗಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ತಾಳ್ಮೆಯಿರಲಿ.
ಕುಂಭ: ನೀವು ಮಾಡುವ ಕೆಲಸಗಳಲ್ಲಿ ಮುನ್ನಡೆ ಕಂಡುಬಂದರೂ ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ನಿಮ್ಮನ್ನು ಕುಗ್ಗಿಸಲಿವೆ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಮೀನ: ಅಧ್ಯಯನ ಶೀಲರಿಗೆ ಪ್ರಗತಿ. ಇಷ್ಟ ವಸ್ತು ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ಸಹೋದರ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಿಗೆ ಅವಕಾಶ ಕೊಡಬೇಡಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.