Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 17 ಏಪ್ರಿಲ್ 2022 (08:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಭವಿಷ್ಯದ ಬಗ್ಗೆ ಸೂಕ್ತ ಯೋಜನೆ ಹಾಕಿಕೊಂಡ ತೃಪ್ತಿ ನಿಮಗೆ ಸಿಗಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ. ವೃತ್ತಿರಂಗದಲ್ಲಿ ಕಠಿಣ ಪರಿಶ್ರಮ ಪಡಬೇಕಾದೀತು. ದೇಹಾರೋಗ್ಯದ ವಿಚಾರದಲ್ಲಿ ಎಚ್ಚರಿಕೆಯಿರಲಿ.

ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾದೀತು. ಕೃಷಿಕರಿಗೆ ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಜಯ ಸಿಗಲಿದೆ.

ಮಿಥುನ: ವ್ಯಾಪಾರಿಗಳು ವಂಚನೆಗೊಳಗಾಗುವ ಭೀತಿಯಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೈವಾನುಗ್ರಹದಿಂದ ಕೌಟುಂಬಿಕವಾಗಿ ನೆಮ್ಮದಿ, ಸಮೃದ್ಧಿ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಡುವ ಯೋಗ. ವ್ಯಾಪಾರಿಗಳಿಗೆ ನಿರೀಕ್ಷೆಗೂ ಮೀರಿದ ಧನಾದಾಯ ಕಂಡುಬರಲಿದೆ. ಭವಿಷ್ಯದ ಬಗ್ಗೆ ಸೂಕ್ತ ರೀತಿಯ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಅನಗತ್ಯ ಚಿಂತ ಬೇಡ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾದೀತು.

ಕನ್ಯಾ: ಕೌಟುಂಬಿಕವಾಗಿ ಅಭಿವೃದ್ಧಿದಾಯಕ ದಿನಗಳಾಗಿರಲಿದೆ. ದಾಂಪತ್ಯ ಸುಖಕ್ಕೆ ಕೊರತೆಯಾಗದು. ಮಕ್ಕಳಿಗೆ ವಿಶೇಷ ಉಡೊಗರೆ ಕೊಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ತುಲಾ: ಹಿಂದೆ ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ನೆರೆಹೊರೆಯವರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ದಿನದಂತ್ಯಕ್ಕೆ ನೆಮ್ಮದಿ.

ವೃಶ್ಚಿಕ: ನಿಮ್ಮ ಹಠವಾದೀ ಮನೋಭಾವದಿಂದ ಇತರರಿಗೆ ಕಿರಿ ಕಿರಿಯಾದೀತು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಒಳ್ಳೆಯ ಕೆಲಸಗಳಿಗೆ ಧನವ್ಯಯ ಮಾಡಲಿದ್ದೀರಿ. ಚಿಂತೆ ಬೇಡ.

ಧನು: ನೀವು ಇಂದು ಕೈಗೊಳ್ಳುವ ನಿರ್ಧಾರಗಳು ನಿಮ್ಮ ಭವಿಷ್ಯಕ್ಕೆ ಪೂರಕವಾಗಲಿದೆ. ಕಾರ್ಯರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯವೈಖರಿ ಇತರರಿಗೂ ಇಷ್ಟವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕುಂಭ: ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಿರಿ. ಕುಟುಂಬ ಸದಸ್ಯರ ಮನದಿಂಗಿತ ಪೂರೈಸಲು ಮುಂದಾಗಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಮೀನ: ಅಂದುಕೊಂಡ ಕೆಲಸ ಪೂರ್ತಿ ಮಾಡಿದ ಸಂತೋಷ, ನೆಮ್ಮದಿ ನಿಮ್ಮದಾಗಲಿದೆ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ