Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 26 ಏಪ್ರಿಲ್ 2022 (07:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವೃತ್ತಿರಂಗದಲ್ಲಿ ನಿಮ್ಮ ಸದಾಶಯಗಳು ನೆರವೇರಲಿದೆ. ಆರ್ಥಿಕವಾಗಿ ಹಣಕಾಸಿನ ಯೋಜನೆಗಳನ್ನು ಸರಿಯಾಗಿ ನಿಭಾಯಿಸಿ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ವ್ಯಾಪಾರಿಗಳಿಗೆ ಮುನ್ನಡೆ ಕಂಡುಬರಲಿದೆ.

ವೃಷಭ: ಸಾಂಸಾರಿಕವಾಗಿ ನಿಮ್ಮ ಕಷ್ಟಗಳಿಗೆ ಆತ್ಮೀಯರ ಸಹಾಯ ಸಿಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಪ್ರಯತ್ನಿಸಲಿದ್ದೀರಿ. ವೈಯಕ್ತಿಕ ಜೀವನದಲ್ಲಿ ಏಳಿಗೆ ಕಂಡುಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಕಾರ್ಯಕ್ಷೇತ್ರದಲ್ಲಿ ನಿಮಗೆ ಅಡೆತಡೆಯಾಗಿದ್ದ ವಿಚಾರಗಳು ನಿವಾರಣೆಯಾಗಲಿವೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ. ವ್ಯಾವಹಾರಿಕವಾಗಿ ಮುನ್ನಡೆ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರುವುದು. ವ್ಯವಹಾರದಲ್ಲಿ ಅಡ್ಡಿ ಆತಂಕಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಚಿಂತೆ ಬೇಡ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿ ಎದುರಾಗಲಿದೆ. ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಹೊಸದಾಗಿ ಮದುವೆಯಾಗಿದ್ದರೆ ಹೊಂದಾಣಿಕೆ ಕಷ್ಟವೆನಿಸಬಹುದು. ತಾಳ್ಮೆ, ಸಂಯಮ ಅಗತ್ಯ. ಹಣಕಾಸಿನ ಹರಿವಿಗೆ ತೊಂದರೆಯಿರದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ಮಾಡಲಿದ್ದೀರಿ. ಕಾರ್ಯನಿಮಿತ್ತ ಸಂಚಾರ ಮಾಡಬೇಕಾದೀತು.

ತುಲಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ.

ವೃಶ್ಚಿಕ: ಬಹಳ ದಿನಗಳಿಂದ ನಿಮಗೆ ಕಾಡುತ್ತಿದ್ದ ಸಮಸ್ಯೆಗಳಿಗೆ ಅಂತ್ಯ ಹಾಡಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಧನು: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವಾದೀತು. ಬಹುಜನರ ಸಂಪರ್ಕದಿಂದ ಕಾರ್ಯಸಿದ್ಧಿಯಾಗಲಿದೆ.

ಮಕರ: ಮಾತಾಪಿತೃಗಳಿಂದ ನಿಮ್ಮ ಸಂತೋಷ ವೃದ್ಧಿಯಾಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಜನೆ ಹೊಳೆಯಲಿದೆ. ಆರ್ಥಿಕವಾಗಿ ಹಣ ಗಳಿಕೆಗೆ ನಾನಾ ಮಾರ್ಗ ಕಂಡುಬರಲಿದೆ. ತಾಳ್ಮೆ, ಸಂಯಮ ಅಗತ್ಯ.

ಕುಂಭ: ದೂರದ ವ್ಯವಹಾರದಲ್ಲಿ ಅನ್ಯರ ಸಹಾಯದಿಂದ ವೃದ್ಧಿ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಕೌಟುಂಬಿಕವಾಗಿ ನಿಮ್ಮ ನಿರ್ಧಾರಗಳಿಗೆ ಮನೆಯವರ ವಿರೋಧ ಎದುರಿಸಬೇಕಾದೀತು.

ಮೀನ: ಕೆಲಸ ಕಾರ್ಯಗಳಲ್ಲಿ ಉತ್ಸಾಹದಿಂದ ತೊಡಗಿಸಿಕೊಳ್ಳಲಿದ್ದೀರಿ. ನಿಮ್ಮ ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ