ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಮಾಡಬೇಕಾದ ಕೆಲಸ ಪೂರ್ತಿಯಾಗದೇ ಮನಸ್ಸಿಗೆ ನೆಮ್ಮದಿಯಿರದು. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪ್ರೀತಿ ಪಾತ್ರರನ್ನು ಭೇಟಿಯಾಗಲಿದ್ದೀರಿ.
ವೃಷಭ: ನೀವು ಇಷ್ಟಪಡುವ ವ್ಯಕ್ತಿಗಳು ಜೊತೆಗೇ ಇದ್ದರೂ ಋಣಾತ್ಮಕ ಚಿಂತೆಗಳು ಘಾಸಿಗೊಳಿಸಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ.
ಮಿಥುನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗವಿದೆ. ಬೇರೆಯವರ ಜೀವನದಲ್ಲಿ ಮೂಗು ತೂರಿಸುವ ಅನಗತ್ಯ ಪ್ರಯತ್ನ ಮಾಡಬೇಡಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಕರ್ಕಟಕ: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಸ್ವಯಂ ವೃತ್ತಿಯವರಿಗೆ ಉನ್ನತಿಯ ಯೋಗವಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.
ಸಿಂಹ: ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ವಿಶೇಷವಾದ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಮನಸ್ಸಿನಲ್ಲಿ ವಿಚಾರಗಳನ್ನು ಇತರರೊಂದಿಗೆ ಹಂಚಿಕೊಳ್ಳಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದುಂದು ವೆಚ್ಚಕ್ಕೆ ಕಡಿವಾಣವಿರಲಿ.
ತುಲಾ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಕೌಟುಂಬಿಕವಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ. ಮಾತಿನ ಮೇಲೆ ನಿಗಾ ಇರಲಿ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸಲಿದ್ದೀರಿ.
ವೃಶ್ಚಿಕ: ಅಂದುಕೊಂಡ ಕೆಲಸ ಪೂರ್ತಿ ಮಾಡಲು ಪ್ರಯತ್ನ ಮಾಡಲಿದ್ದೀರಿ. ನಿಮ್ಮ ವೈಯಕ್ತಿಕ ಕಷ್ಟಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಧನು: ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕಟ್ಟಡ ಕಾಮಗಾರಿ ಕೆಲಸಕ್ಕೆ ವಿಘ್ನಗಳು ಬಂದೀತು. ಕುಲದೇವರ ಪ್ರಾರ್ಥಿಸಿದರೆ ಉತ್ತಮ.
ಮಕರ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಕಾಲ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗವಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಕುಂಭ: ಉದ್ಯೋಗ ಸ್ಥಳದಲ್ಲಿ ಪರರಿಂದ ಸಹಾಯ ನಿರೀಕ್ಷಿಸಬಹುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳು ನಿವಾರಣೆಯಾಗಲಿವೆ. ಮಾನಸಿಕವಾಗಿ ನೆಮ್ಮದಿಯಿರುವುದು.
ಮೀನ: ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬಂದೀತು. ದೂರದ ಮಿತ್ರರನ್ನು ಭೇಟಿಯಾಗುವ ಯೋಗ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಯೇ ಹೆಚ್ಚು. ಪಾಲುದಾರಿಕೆ ವ್ಯವಹಾರದಲ್ಲಿ ಲಾಭವಾಗಲಿದೆ. ಅನಗತ್ಯ ಚಿಂತೆ ಬೇಡ.