ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 30 ಏಪ್ರಿಲ್ 2022 (05:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಪರರಿಗೆ ಸಹಾಯ ಮಾಡಿದ ನೆಮ್ಮದಿ ನಿಮಗೆ ಸಿಗಲಿದೆ. ಬೇರೆಯವರ ಚಾಡಿಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ನಿರೀಕ್ಷೆಯಂತೆ ಪ್ರಗತಿ ಕಾಣದೇ ನಿರಾಸೆಯಾದೀತು. ಆಪ್ತರ ಸಹಾಯಕ್ಕೆ ನಿರೀಕ್ಷೆ ಮಾಡಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇಹಾರೋಗ್ಯದಲ್ಲಿ ಕಾಳಜಿ ಅಗತ್ಯ.

ಮಿಥುನ: ವೃತ್ತಿರಂಗದಲ್ಲಿ ಎದುರಾಗುವ ಸವಾಲುಗಳಿಗೆ ಕ್ರಿಯಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯಗತಗೊಳಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧ ಕೂಡಿಬರಲಿದೆ.

ಕರ್ಕಟಕ: ಬಹಳ ದಿನಗಳಿಂದ ಬಾಕಿಯಿದ್ದ ದೇವತಾ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಆರ್ಥಿಕವಾಗಿ ಅಭಿವೃದ್ಧಿಗೆ ಅನ್ಯದಾರಿಗಳ ಬಗ್ಗೆ ಯೋಚಿಸಬೇಕಾದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿರಲಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದ್ದು, ಮನಸ್ಸಿಗೆ ನೆಮ್ಮದಿಯಾದೀತು. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಪ್ರಯತ್ನ ನಡೆಸಲಿದ್ದೀರಿ. ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಹಿತಮಿತವಾದ ಮಾತು ಇತರರನ್ನೂ ಆಕರ್ಷಿಸಲಿದೆ. ವ್ಯಾವಹಾರಿಕವಾಗಿ ಏಳಿಗೆ ಕಂಡುಬರಲಿದ್ದು, ನೆಮ್ಮದಿಯಿರಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ದಿನದಂತ್ಯಕ್ಕೆ ಸಂತೋಷದ ಸುದ್ದಿಯಿರಲಿದೆ.

ತುಲಾ: ಮಕ್ಕಳ ಏಳಿಗೆ ಕಂಡು ಸಂತೋಷವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ವೃಶ್ಚಿಕ: ನಿಮ್ಮ ತಾಳ್ಮೆಯ ಸ್ವಭಾವ ಉಪಯೋಗಕ್ಕೆ ಬರಲಿದೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ಸರಿಹೋದೀತು. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಧನು: ಸ್ವಯಂ ವ್ಯಾಪಾರ, ವ್ಯವಹಾರ ಮಾಡುವವರಿಗೆ ಮುನ್ನಡೆ ಕಂಡುಬಂದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮಕರ: ಅಂದುಕೊಂಡ ಕೆಲಸಗಳನ್ನು ನಿಗದಿತ ಸಮಯಕ್ಕೇ ಪೂರ್ತಿ ಮಾಡಿದ ನೆಮ್ಮದಿ ನಿಮ್ಮದಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ವಾಹನ, ಭೂಮಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಜವಾಬ್ಧಾರಿ ಜೊತೆಗೆ ವಿಶೇಷ ಸ್ಥಾನ ಮಾನವೂ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ಸಂತೃಪ್ತಿ ಸಿಗಲಿದೆ.

ಮೀನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments