ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 3 ಮೇ 2022 (06:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಸರಕಾರೀ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕಟ್ಟಡ ಕಾಮಗಾರಿ ಕೆಲಸಗಳನ್ನು ಕೆಲವು ದಿನ ಮುಂದೂಡುವುದು ಉತ್ತಮ. ದುಂದು ವೆಚ್ಚ ಬೇಡ.

ಮಿಥುನ: ವೃತ್ತಿರಂಗದಲ್ಲಿ ನಿಮಗೆ ಪ್ರತಿಸ್ಪರ್ಧೆಗಳು ಎದುರಾದೀತು. ತಾಳ್ಮೆ, ಸಂಯಮದಿಂದ ವ್ಯವಹರಿಸಿ. ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆಯಿರಲಿದೆ.

ಕರ್ಕಟಕ: ಸ್ವಯಂ ವ್ಯಾಪಾರ, ವ್ಯವಹಾರ ಮಾಡುವವರಿಗೆ ಲಾಭ ಕಂಡುಬರಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಅಗತ್ಯ. ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಮೆಚ್ಚುಗೆ ಸಿಗಲಿದೆ. ದೇಹಾರೋಗ್ಯದ ಸಮಸ್ಯೆಗಳು ದೂರವಾದೀತು.

ಸಿಂಹ: ವ್ಯವಹಾರದಲ್ಲಿ ನಿಮಗೆ ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಸಂತೋಷ ಸಿಗುವುದು.

ಕನ್ಯಾ: ವೈದ್ಯಕೀಯ ವೃತ್ತಿಯಲ್ಲಿರುವವರಿಗೆ ಬಿಡುವಿಲ್ಲದ ದುಡಿತ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಅನಿವಾರ್ಯ ಕಾರ್ಯ ನಿಮಿತ್ತ ಅನ್ಯ ಊರಿಗೆ ಪ್ರಯಾಣ ಮಾಡಬೇಕಾದೀತು. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ತುಲಾ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಆಸ್ತಿ ವಿವಾದಗಳು ಬಗೆಹರಿಯಲಿವೆ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲಾದಿ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ನಿರೀಕ್ಷಿಸಿದಂತೇ ಪ್ರಗತಿ ಕಂಡುಬರಲಿದೆ. ಅನಗತ್ಯ ಮಾತುಗಳಿಂದ ವಿವಾದ ಮೈಮೇಲೆಳೆದುಕೊಳ್ಳಬೇಡಿ. ಎಚ್ಚರಿಕೆಯಿರಲಿ.

ಧನು: ಹೊಸದಾಗಿ ಆರಂಭಿಸಿದ್ದ ವೃತ್ತಿ, ವ್ಯವಹಾರಗಳಲ್ಲಿ ಮುನ್ನಡೆ ಕಂಡುಬಂದೀತು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೈವಾನುಕೂಲವಿರಲಿದೆ.

ಮಕರ: ಮಹಿಳೆಯರಿಗೆ ಹೊಸ ಬಟ್ಟೆ, ಆಭರಣ ತೊಡುವ ಅವಕಾಶ. ಸಾಂಸಾರಿಕವಾಗಿ ಸಂತೋಷ, ನೆಮ್ಮದಿ ಕಂಡುಬರಲಿದೆ. ಧನಗಳಿಕೆಗೆ ಅನ್ಯ ದಾರಿಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತಾಳ್ಮೆ ಅಗತ್ಯ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿಗಾಗಿ ಪ್ರಯತ್ನಿಸುತ್ತಿದ್ದರೂ ಮುನ್ನಡೆಯಿರಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.

ಮೀನ: ನಿಮ್ಮದಲ್ಲದ ವಸ್ತುಗಳ ಬಗ್ಗೆ ಮೋಹ ಬೇಡ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬಂದೀತು. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ವಿವಾಹ, ಸಂತಾನಕ್ಕೆ ಅಡ್ಡಿಯಾಗುತ್ತಿದ್ದರೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments