Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 9 ಮೇ 2022 (08:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯಸಾಧನೆಗೆ ಕ್ರಿಯಾತ್ಮಕ ಹಾದಿ ಹಿಡಿಯಬೇಕಾದೀತು. ಹೊಸ ವಿಚಾರಗಳನ್ನು ಕಲಿಯುವ ಉತ್ಸಾಹ ಕಂಡುಬರಲಿದೆ. ಆರ್ಥಿಕವಾಗಿ ಭವಿಷ್ಯದ ನಿಟ್ಟಿನಿಂದ ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ.

ವೃಷಭ: ಸಾಂಸಾರಿಕವಾಗಿ ನಿಮ್ಮ ಮಾತಿನಿಂದ ಇತರರು ತಾಳ್ಮೆ ಕಳೆದುಕೊಳ್ಳುವ ಪ್ರಸಂಗ ಎದುರಾದೀತು. ಮನ‍ಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಧನಾತ್ಮಕ ವಿಚಾರಗಳನ್ನು ಅಳವಡಿಸಿಕೊಳ್ಳುವ ಪ್ರಯತ್ನ ಮಾಡಲಿದ್ದೀರಿ. ಹಿರಿಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಸುಬ್ರಮ್ಹಣ್ಯ ಪ್ರಾರ್ಥನೆ ಮಾಡುವುದು ಉತ್ತಮ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ಸಾಂಸಾರಿಕವಾಗಿ ನಿಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ದೂರ ಮಾಡಲು ಪ್ರಯತ್ನಿಸಲಿದ್ದೀರಿ. ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ.

ಸಿಂಹ: ಹೊಸದಾಗಿ ಮನಸ್ಸಿನಲ್ಲಿ ಮೂಡಿದ ವಿಚಾರಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಧನಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರವಿರಲಿದ್ದು, ದಾಂಪತ್ಯದಲ್ಲಿ ನೆಮ್ಮದಿ ಕಂಡುಬರುವುದು.

ಕನ್ಯಾ: ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಹೊಂದಾಣಿಕೆ ಮನೋಭಾವದಿಂದಾಗಿ ಸಂಸಾರದಲ್ಲಿ ಸಾಮರಸ್ಯವರಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಕೊಡಲಿದ್ದೀರಿ. ಪ್ರಯಾಣದಲ್ಲಿ ಎಚ್ಚರಿಕೆಯಿರಲಿ.

ತುಲಾ: ಹೊಸ ಬಗೆಯ ಚಿಂತನೆಗಳು ನಿಮ್ಮನ್ನು ಹೊಸ ಹಾದಿಗೆ ಕರೆದೊಯ್ಯಲಿದೆ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭ ಕಂಡುಬರುವುದು. ಮೆಚ್ಚಿನ ವ್ಯಕ್ತಿಗಳ ಭೇಟಿಯಾಗಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ. ತಾಳ್ಮೆ ಅಗತ್ಯ.

ಧನು: ನಿಮ್ಮ ಮಾತಿನಿಂದ ಇತರರ ಮನಸ್ಸಿಗೆ ನೋವಾದೀತು. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುವುದರಲ್ಲಿ ಅರ್ಥವಿಲ್ಲ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಕರ: ವ್ಯಾಪಾರ, ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಕುಂಭ: ಶುಭ ಕಾರ್ಯನಿಮಿತ್ತ ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಮೀನ: ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ತಾಳ್ಮೆಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ