ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ನಿಮ್ಮ ವಿಚಾರಧಾರೆಗಳಿಗೆ ಸೂಕ್ತ ಬೆಲೆ ಸಿಗದೇ ಬೇಸರವಾದೀತು. ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ಪೂರ್ತಿ ಮಾಡಲಿದ್ದೀರಿ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಹಿರಿಯರ ಮಾತಿಗೆ ಮನ್ನಣೆ ಕೊಡಬೇಕಾಗುತ್ತದೆ.
ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆಯ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆಯುಂಟಾದೀತು.
ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ. ಕ್ರಿಯಾತ್ಮಕ ಯೋಚನೆ ಮಾಡಬೇಕಾಗುತ್ತದೆ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ತಾಳ್ಮೆ, ಸಂಯಮ ಅಗತ್ಯ.
ಕರ್ಕಟಕ: ಗೃಹ ಸಂಬಂಧೀ ಕೆಲಸಗಳಿಗಾಗಿ ಹಣ ಖರ್ಚಾದೀತು. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು, ಎಚ್ಚರ.
ಸಿಂಹ: ಕಾರ್ಯಕ್ಷೇತ್ರದಲ್ಲಿ ನಿಮ್ಮ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬಂದೀತು. ನೆರೆಹೊರೆಯವರ ಕಷ್ಟಕ್ಕೆ ಆಗಿಬರಲಿದ್ದೀರಿ. ಮಾತು, ವರ್ತನೆಯ ಮೇಲೆ ಹಿಡಿತವಿರಲಿ. ಇಷ್ಟಾರ್ಥ ಸಿದ್ಧಿಗೆ ದೇವರ ಮೊರೆ ಹೋಗಲಿದ್ದೀರಿ.
ಕನ್ಯಾ: ಎಷ್ಟೋ ದಿನಗಳಿಂದ ಬಾಕಿಯಿದ್ದ ಕೆಲಸಗಳು ಇಂದು ಪೂರ್ತಿಯಾದ ನೆಮ್ಮದಿ ನಿಮ್ಮದಾಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ತುಲಾ: ಪಾಲುದಾರಿಕೆ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರುವುದು. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ ಗೌರವ ಹೆಚ್ಚಾಗಲಿದೆ.
ವೃಶ್ಚಿಕ: ನೀವು ನಂಬಿಕೊಂಡವರಿಂದಲೇ ವಂಚನೆಯಾಗುವ ಭೀತಿಯಿದೆ. ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.
ಧನು: ಕಳೆದು ಹೋದ ದಿನಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ನಿಮ್ಮ ನೇರ ಮಾತಿನಿಂದ ಕಾರ್ಯಸಾಧನೆಯಾಗಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾದೀತು. ತಾಳ್ಮೆ ಅಗತ್ಯ.
ಮಕರ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡದಿಂದ ಕೊಂಚ ಬಿಡುವು ಸಿಗಲಿದೆ. ನೆರೆಹೊರೆಯವರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ತಾಳ್ಮೆಯಿರಲಿ.
ಕುಂಭ: ನಿಮ್ಮ ಕಾರ್ಯ ಸಾಧನೆಗೆ ಅಧಿಕ ಪರಿಶ್ರಮಪಡಬೇಕಾದ ಸಂದರ್ಭ ಎದುರಾದೀತು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.
ಮೀನ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಸಂದರ್ಭ ಎದುರಾದೀತು. ಉದ್ಯೋಗ ಕ್ಷೇತ್ರದಲ್ಲಿ ಹೊಸ ಬಗೆಯ ಪ್ರಯೋಗಗಳಿಗೆ ಅವಕಾಶ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆಯಿಂದ ಒಳಿತಾಗುವುದು.