ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 10 ಮೇ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ವಿಚಾರಧಾರೆಗಳಿಗೆ ಸೂಕ್ತ ಬೆಲೆ ಸಿಗದೇ ಬೇಸರವಾದೀತು. ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ಪೂರ್ತಿ ಮಾಡಲಿದ್ದೀರಿ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಹಿರಿಯರ ಮಾತಿಗೆ ಮನ್ನಣೆ ಕೊಡಬೇಕಾಗುತ್ತದೆ.

ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆಯ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆಯುಂಟಾದೀತು.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ. ಕ್ರಿಯಾತ್ಮಕ ಯೋಚನೆ ಮಾಡಬೇಕಾಗುತ್ತದೆ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ತಾಳ್ಮೆ, ಸಂಯಮ ಅಗತ್ಯ.

ಕರ್ಕಟಕ: ಗೃಹ ಸಂಬಂಧೀ ಕೆಲಸಗಳಿಗಾಗಿ ಹಣ ಖರ್ಚಾದೀತು. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು, ಎಚ್ಚರ.

ಸಿಂಹ: ಕಾರ್ಯಕ್ಷೇತ್ರದಲ್ಲಿ ನಿಮ್ಮ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬಂದೀತು. ನೆರೆಹೊರೆಯವರ ಕಷ್ಟಕ್ಕೆ ಆಗಿಬರಲಿದ್ದೀರಿ. ಮಾತು, ವರ್ತನೆಯ ಮೇಲೆ ಹಿಡಿತವಿರಲಿ. ಇಷ್ಟಾರ್ಥ ಸಿದ್ಧಿಗೆ ದೇವರ ಮೊರೆ ಹೋಗಲಿದ್ದೀರಿ.

ಕನ್ಯಾ: ಎಷ್ಟೋ ದಿನಗಳಿಂದ ಬಾಕಿಯಿದ್ದ ಕೆಲಸಗಳು ಇಂದು ಪೂರ್ತಿಯಾದ ನೆಮ್ಮದಿ ನಿಮ್ಮದಾಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಪಾಲುದಾರಿಕೆ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರುವುದು. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ ಗೌರವ ಹೆಚ್ಚಾಗಲಿದೆ.

ವೃಶ್ಚಿಕ: ನೀವು ನಂಬಿಕೊಂಡವರಿಂದಲೇ ವಂಚನೆಯಾಗುವ ಭೀತಿಯಿದೆ. ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಧನು:  ಕಳೆದು ಹೋದ ದಿನಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ನಿಮ್ಮ ನೇರ ಮಾತಿನಿಂದ ಕಾರ್ಯಸಾಧನೆಯಾಗಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾದೀತು. ತಾಳ್ಮೆ ಅಗತ್ಯ.

ಮಕರ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡದಿಂದ ಕೊಂಚ ಬಿಡುವು ಸಿಗಲಿದೆ. ನೆರೆಹೊರೆಯವರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ತಾಳ್ಮೆಯಿರಲಿ.

ಕುಂಭ: ನಿಮ್ಮ ಕಾರ್ಯ ಸಾಧನೆಗೆ ಅಧಿಕ ಪರಿಶ್ರಮಪಡಬೇಕಾದ ಸಂದರ್ಭ ಎದುರಾದೀತು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಮೀನ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಸಂದರ್ಭ ಎದುರಾದೀತು. ಉದ್ಯೋಗ ಕ್ಷೇತ್ರದಲ್ಲಿ ಹೊಸ ಬಗೆಯ ಪ್ರಯೋಗಗಳಿಗೆ ಅವಕಾಶ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆಯಿಂದ ಒಳಿತಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments