Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 11 ಮೇ 2022 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹೊಸ ವಿಚಾರಗಳಿಗೆ ನಿಮ್ಮನ್ನು ತೆರೆದುಕೊಳ್ಳುವುದು ಉತ್ತಮ. ಕೆಲವೊಂದು ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹೊಸ ಕೆಲಸಕ್ಕೆ ಕೈ ಹಾಕಲು ಚಿಂತನೆ ನಡೆಸಲಿದ್ದೀರಿ.

ವೃಷಭ: ವ್ಯಾವಹಾರಿಕವಾಗಿ ಲಾಭವಾದರೂ ಹಿತಶತ್ರುಗಳ ಕಾಟ ಕಂಡುಬಂದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಮಿಥುನ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಚಿಂತೆ ಬೇಡ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಕರ್ಕಟಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಇಷ್ಟ ಭೋಜನ ಮಾಡುವ ಭಾಗ್ಯವಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಕೈಗೊಳ್ಳುವ ಕೆಲಸಗಳಲ್ಲಿ ಯಶಸ್ಸು ಸಿಗಬೇಕಾದರೆ ಗುರುಹಿರಿಯರ ಆಶೀರ್ವಾದ ಪಡೆಯುವುದು ಉತ್ತಮ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಕನ್ಯಾ: ಪ್ರೀತಿ ಪಾತ್ರರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ಸಹೋದರ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಅನಗತ್ಯ ಚಿಂತೆ ಬೇಡ.

ತುಲಾ: ಮಕ್ಕಳ ಭವಿಷ್ಯ ಸಂಬಂಧ ಹೊಸ ತೀರ್ಮಾನಗಳನ್ನು ಕೈಗೊಳ್ಳಲಿದ್ದೀರಿ. ಸಕಾಲದಲ್ಲಿ ಹಣಕಾಸಿನ ನೆರವು ಹರಿದುಬರುವುದರಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಹೊಸದಾಗಿ ವೃತ್ತಿ ಜೀವನ ಆರಂಭಿಸಿದವರಿಗೆ ಹೊಸ ಸವಾಲುಗಳು ಎದುರಾದೀತು. ದಾಂಪತ್ಯದಲ್ಲಿ ಉತ್ತಮ ಫಲಗಳಿಗಾಗಿ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿದರೆ ಉತ್ತಮ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಧನು: ಸಾಂಸಾರಿಕವಾಗಿ ಉನ್ನತಿಯ ಯೋಗವಿದೆ. ಹೊಸದಾಗಿ ಮದುವೆಯಾಗಿದ್ದರೆ ಸುಂದರ ಕ್ಷಣ ಕಳೆಯುವ ಯೋಗ. ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಹೊಸ ವಿಚಾರಗಳಿಗೆ ನಿಮ್ಮನ್ನು ನೀವು ತೆರೆದುಕೊಳ್ಳಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕಾರ್ಯರಂಗದಲ್ಲಿ ಸಹೋದ್ಯೋಗಿಗಳ ನೆರವು ಕಂಡುಬರಲಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಕುಂಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ ತೋರಿಬಂದರೂ ಮನಸ್ಸಿಗೆ ತೃಪ್ತಿಯೆನಿಸದು. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ತಾಳ್ಮೆಯಿರಲಿ.

ಮೀನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಭೇಟಿ ಸಾಧ‍್ಯತೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Sade Sati Shani 2025: 2025 ರಲ್ಲಿ ಸಾಡೇ ಸಾತಿ ಶನಿ ಇರುವವರು ಈ ಪರಿಹಾರ ಮಾಡಿ

Sade Sati Shani 2025: ಶನಿ ದೆಶೆಯ ಮೂರು ಚರಣಗಳು ಮತ್ತು ಅದರ ಪರಿಣಾಮಗಳು

Sade Sati Shani 2025: 2025 ರಲ್ಲಿ ಸಾಡೇಸಾತಿ ಶನಿ ಯಾರಿಗೆಲ್ಲಾ ಇದೆ ಇಲ್ಲಿದೆ ವಿವರ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Shani Dosha horoscope 2025: ಮೀನ ರಾಶಿಯವರಿಗೆ 2025 ರಿಂದ ಶನಿ ದೆಶೆ ಶುರು

ಮುಂದಿನ ಸುದ್ದಿ
Show comments