ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ವೃತ್ತಿರಂಗದಲ್ಲಿ ಯಶಸ್ಸಿಗಾಗಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಬಹಳ ದಿನಗಳ ನಂತರ ಆಪ್ತೇಷ್ಟರ ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ದೂರ ಪ್ರಯಾಣ ಮಾಡಲಿದ್ದೀರಿ.
ವೃಷಭ: ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಬರಲಿದ್ದು, ನಿಮ್ಮನ್ನು ಚಿಂತೆಗೆ ದೂಡಲಿದೆ. ಆಪ್ತರ ಸಲಹೆ ಪಡೆಯಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳ ಭವಿಷ್ಯದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೀರಿ.
ಮಿಥುನ: ಕಾರ್ಯರಂಗದಲ್ಲಿ ಉನ್ನತ ಸ್ಥಾನ ಮಾನಕ್ಕೆ ಪಡುವ ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.
ಕರ್ಕಟಕ: ಹೊಸ ಜನರನ್ನು ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಭೂಮ್ಯಾದಿ ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಬಂಧು ಮಿತ್ರರಿಂದ ಪ್ರೋತ್ಸಾಹವಿರಲಿದೆ. ಅನಗತ್ಯ ಚಿಂತೆ ಬೇಡ.
ಸಿಂಹ: ಕಾರ್ಯಕ್ಷೇತ್ರದಲ್ಲಿ ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ, ಭಕ್ತಿ ಕಂಡುಬರಲಿದೆ. ಬಂಧು ಜನರ ಪ್ರೋತ್ಸಾಹ ಕಂಡುಬರಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.
ಕನ್ಯಾ: ನಿಮ್ಮ ಪ್ರಯತ್ನಗಳಿಗೆ ತಕ್ಕ ಫಲ ಸಿಕ್ಕೀತು. ಸಂಶೋಧನಾ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಕೊಂಚ ಹಿನ್ನಡೆಯಾದರೂ ನಷ್ಟವಾಗದು. ದೇವತಾ ಪ್ರಾರ್ಥನೆ ಮಾಡಿ.
ತುಲಾ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದ್ದು, ಕೌಟುಂಬಿಕವಾಗಿ ನೆಮ್ಮದಿಯಿರಲಿದೆ. ಮಾತಿನಲ್ಲಿ ತಾಳ್ಮೆ, ಸಂಯಮ ಕಾಪಾಡಿದರೆ ಉತ್ತಮ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವ ಸಾಧ್ಯತೆ.
ವೃಶ್ಚಿಕ: ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದ್ದು, ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರುವುದು. ವಾಹನ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.
ಧನು: ಕುಟುಂಬ ಸದಸ್ಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ದೂರ ಪ್ರಯಾಣ ಕೈಗೊಳ್ಳಲಿದ್ದೀರಿ. ಇಷ್ಟಭೋಜನ ಮಾಡುವ ಯೋಗ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.
ಮಕರ: ಯಂತ್ರೋಪಕರಣಗಳ ಕೆಲಸ ಕಾರ್ಯಗಳನ್ನು ಮಾಡುವಾಗ ಎಚ್ಚರಿಕೆ ಅಗತ್ಯ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಗಮನ ಸೆಳೆಯಲಿದ್ದೀರಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.
ಕುಂಭ: ಸರಕಾರಿ ನೌಕರರ ಮುಂಬಡ್ತಿಯ ಕನಸು ಸದ್ಯದಲ್ಲೇ ನನಸಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ನಾಲಿಗೆ ಚಪಲಕ್ಕೆಕ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಎಚ್ಚರ.
ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ತಾಳ್ಮೆಯಿರಲಿ.