ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಬಹಳ ದಿನಗಳ ನಂತರ ನಿಮ್ಮ ದೈನಂದಿನ ಚಟುವಟಿಕೆಗೆ ಮರಳಿದ ಖುಷಿ ನಿಮ್ಮದಾಗಲಿದೆ. ಗೃಹಿಣಿಯರಿಗೆ ಮನೆಗೆಲಸದಿಂದ ದೇಹಾಯಾಸವಾದೀತು. ಮಕ್ಕಳಿಗೆ ಇಷ್ಟಭೋಜನ ಮಾಡಿಕೊಡಲಿದ್ದೀರಿ. ತಾಳ್ಮೆಯಿರಲಿ.
ವೃಷಭ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳು ಬಂದಾಗ ಸಹೋದ್ಯೋಗಿಗಳ ನೆರವು ಸಿಗಲಿದೆ. ಹಣಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.
ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಬ್ಯಾಂಕ್ ವೃತ್ತಿಯವರಿಗೆ ಬಿಡುವಿಲ್ಲದ ದುಡಿತ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.
ಕರ್ಕಟಕ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಮೋಹ ಬೆಳೆಸಿಕೊಳ್ಳಲಿದ್ದೀರಿ. ಮನಸ್ಸಿನ ಭಾವನೆಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲು ಸಮಯ ಸಿಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳುವುದು ಉತ್ತಮ.
ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉತ್ತಮ ಸ್ಥಾನ ಮಾನದ ನಿರೀಕ್ಷೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗುವುದರಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ.
ಕನ್ಯಾ: ಸಾಂಸಾರಿಕವಾಗಿ ಕುಟುಂಬ ಸದಸ್ಯರ ಪ್ರೋತ್ಸಾಹ ನಿಮ್ಮ ಬಲವರ್ಧನೆ ಮಾಡಲಿದೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ತುಲಾ: ಕಾರ್ಯ ರಂಗದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಪ್ರಯತ್ನ ನಡೆಸಬೇಕಾಯಿತು. ಮಾತಿನ ಮೇಲೆ ಸಂಯಮವಿರಲಿ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.
ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.
ಧನು: ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳ ಸಾಧ‍್ಯತೆಯಿದ್ದು, ಹೊಸ ವ್ಯವಹಾರಗಳಿಗೆ ಅಡೆತಡೆಗಳು ಕಂಡುಬಂದೀತು. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ವಿಶೇಷವಾದ ವ್ಯಕ್ತಿಗಳ ಭೇಟಿಯಾಗಲಿದ್ದೀರಿ.
ಮಕರ: ಬಹುದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಣೆಯಾಗಲಿದೆ.
ಕುಂಭ: ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವವರಿಗೆ ಉನ್ನತಿಯ ಯೋಗವಿದೆ. ಕಾರ್ಯರಂಗದಲ್ಲಿ ಹೊಸ ಅವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿ ಸಾಧ್ಯತೆ.
ಮೀನ: ಬಹಳ ದಿನಗಳಿಂದ ಅರ್ಧಕ್ಕೇ ಬಾಕಿಯಾಗಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಪ್ರೇಮಿಗಳ ಸಂಬಂಧಕ್ಕೆ ಮನೆಯವರ ಒಪ್ಪಿಗೆ ಸಿಗಲಿದೆ. ಇಷ್ಟ ಮಿತ್ರರ ಭೇಟಿಯಾಗಲಿದ್ದು, ಉತ್ತಮ ಸಮಯ ಕಳೆಯಲಿದ್ದೀರಿ.