Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 16 ಮೇ 2022 (07:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹಳ ದಿನಗಳ ನಂತರ ನಿಮ್ಮ ದೈನಂದಿನ ಚಟುವಟಿಕೆಗೆ ಮರಳಿದ ಖುಷಿ ನಿಮ್ಮದಾಗಲಿದೆ. ಗೃಹಿಣಿಯರಿಗೆ ಮನೆಗೆಲಸದಿಂದ ದೇಹಾಯಾಸವಾದೀತು. ಮಕ್ಕಳಿಗೆ ಇಷ್ಟಭೋಜನ ಮಾಡಿಕೊಡಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳು ಬಂದಾಗ ಸಹೋದ್ಯೋಗಿಗಳ ನೆರವು ಸಿಗಲಿದೆ. ಹಣಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಬ್ಯಾಂಕ್ ವೃತ್ತಿಯವರಿಗೆ ಬಿಡುವಿಲ್ಲದ ದುಡಿತ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕರ್ಕಟಕ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಮೋಹ ಬೆಳೆಸಿಕೊಳ್ಳಲಿದ್ದೀರಿ. ಮನಸ್ಸಿನ ಭಾವನೆಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲು ಸಮಯ ಸಿಗಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳುವುದು ಉತ್ತಮ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉತ್ತಮ ಸ್ಥಾನ ಮಾನದ ನಿರೀಕ್ಷೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗುವುದರಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ.

ಕನ್ಯಾ: ಸಾಂಸಾರಿಕವಾಗಿ ಕುಟುಂಬ ಸದಸ್ಯರ ಪ್ರೋತ್ಸಾಹ ನಿಮ್ಮ ಬಲವರ್ಧನೆ ಮಾಡಲಿದೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಕಾರ್ಯ ರಂಗದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಪ್ರಯತ್ನ ನಡೆಸಬೇಕಾಯಿತು. ಮಾತಿನ ಮೇಲೆ ಸಂಯಮವಿರಲಿ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಧನು: ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳ ಸಾಧ‍್ಯತೆಯಿದ್ದು, ಹೊಸ ವ್ಯವಹಾರಗಳಿಗೆ ಅಡೆತಡೆಗಳು ಕಂಡುಬಂದೀತು. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ವಿಶೇಷವಾದ ವ್ಯಕ್ತಿಗಳ ಭೇಟಿಯಾಗಲಿದ್ದೀರಿ.

ಮಕರ: ಬಹುದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಣೆಯಾಗಲಿದೆ.

ಕುಂಭ: ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವವರಿಗೆ ಉನ್ನತಿಯ ಯೋಗವಿದೆ. ಕಾರ್ಯರಂಗದಲ್ಲಿ ಹೊಸ ಅವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿ ಸಾಧ್ಯತೆ.

ಮೀನ: ಬಹಳ ದಿನಗಳಿಂದ ಅರ್ಧಕ್ಕೇ ಬಾಕಿಯಾಗಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಪ್ರೇಮಿಗಳ ಸಂಬಂಧಕ್ಕೆ ಮನೆಯವರ ಒಪ್ಪಿಗೆ ಸಿಗಲಿದೆ. ಇಷ್ಟ ಮಿತ್ರರ ಭೇಟಿಯಾಗಲಿದ್ದು, ಉತ್ತಮ ಸಮಯ ಕಳೆಯಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2025: ಮೀನ ರಾಶಿಯವರು 2025 ರಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ

Horoscope 2025: ಕುಂಭ ರಾಶಿಯವರಿಗೆ 2025 ರಲ್ಲಿ ಆರೋಗ್ಯವನ್ನು ಹಗುರವಾಗಿ ಪರಿಗಣಿಸುವಂತಿಲ್ಲ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Horoscope 2025: ಮಕರ ರಾಶಿಯವರಿಗೆ 2025 ರಲ್ಲಿ ಆರೋಗ್ಯದ ಬಗ್ಗೆ ಚಿಂತೆ ಬೇಡ

Horoscope 2025: ಧನು ರಾಶಿಯವರಿಗೆ ಆರೋಗ್ಯದಲ್ಲಿ ಕುಟುಂಬಕ್ಕೂ ತೊಂದರೆ

ಮುಂದಿನ ಸುದ್ದಿ
Show comments