ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 17 ಮೇ 2022 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕಾರ್ಯರಂಗದಲ್ಲಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗದೇ ನಿರಾಸೆಯಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿ ಇರಲಿ. ದುಂದು ವೆಚ್ಚ ಬೇಡ.

ವೃಷಭ: ಹಳೆಯ ತಪ್ಪುಗಳ ಬಗ್ಗೆ ಪಶ್ಚಾತ್ತಾಪವಾಗಲಿದೆ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ. ವಿಶೇಷವಾದ ವ್ಯಕ್ತಿಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದ್ದಾರೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ.

ಮಿಥುನ: ನಿಮ್ಮ ಪ್ರಯತ್ನಗಳಿಗೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಸಹೋದ್ಯೋಗಿಗಳ ಸಹಾಯ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ ನಿಮ್ಮದಾಗಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಆದಾಯ ಹೆಚ್ಚಳವಾಗಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು.

ಕನ್ಯಾ: ದೂರದ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಪಾಲು ಬಂಡವಾಳ ಹೂಡಿಕೆಗೆ ಮನಸ್ಸು ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಗೆ ಕೊರತೆಯಾಗದು.

ತುಲಾ: ಯಾವುದೇ ಕೆಲಸ ಆರಂಭಿಸುವ ಮುನ್ನ ಗುರುಹಿರಿಯರ ಪ್ರಾರ್ಥನೆ ಮಾಡುವುದು ಉತ್ತಮ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ.

ವೃಶ್ಚಿಕ: ನಿಮ್ಮ ಜೊತೆ ಮುನಿಸಿಕೊಂಡಿದ್ದ ಆಪ್ತರೊಂದಿಗೆ ಸಂಬಂಧ ಸರಿ ಹೋಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಿ.

ಧನು: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದ್ದು, ನೆಮ್ಮದಿಯಾಗಲಿದೆ. ಸ್ವಯಂ ವ್ಯಾಪಾರಿಗಳಿಗೆ ಶ್ರಮದಾಯಕ ಕೆಲಸ ಮಾಡಬೇಕಾದ ಅನಿವಾರ್ಯತೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.

ಮಕರ: ಯೋಚನೆ ಮಾಡುವುದು ಒಂದು, ಕಾರ್ಯರೂಪಕ್ಕೆ ತರುವುದು ಇನ್ನೊಂದು ಎಂಬ ಸ್ಥಿತಿ ನಿಮ್ಮದಾಗಲಿದೆ. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಹಿರಿಯರ ಮಧ್ಯಸ್ಥಿಕೆಯಲ್ಲಿ ದಾಯಾದಿಗಳೊಂದಿಗೆ ರಾಜೀ ಸಂಧಾನ ಮಾಡಿಕೊಳ್ಳಲಿದ್ದೀರಿ. ವಾಹನ ಸಂಚಾರದಲ್ಲಿ ಅಡೆತಡೆಗಳು ಬಂದೀತು. ಹಿರಿಯರಿಗೆ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಮೋಹ ಬೆಳೆಸಿಕೊಳ‍್ಳುವುದು ಬೇಡ. ಯೋಗ್ಯ ವಯಸ್ಕರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಸಂಗಾತಿಯ ಆಯ್ಕೆ ವಿಚಾರದಲ್ಲಿ ಎಚ್ಚರವಿರಲಿ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments