ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 18 ಮೇ 2022 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದಿಡೀರ್ ಆಗಿ ಎದುರಾಗುವ ಸಮಸ್ಯೆಗಳಿಂದ ಸಂಕಷ್ಟಕ್ಕೀಡಾಗಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು.

ವೃಷಭ: ಇಷ್ಟ ದೇವತೆಗಳ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಗೊಳ್ಳಲಿರುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.

ಮಿಥುನ: ವೃತ್ತಿರಂಗದಲ್ಲಿ ನಿಮಗೆ ಆಗಿಬರದಂತವರಿಂದ ತೊಂದರೆಗಳು ಎದುರಾದೀತು. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಾಗುವ ಸಂಭವ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಫಲಿತಾಂಶ ಬರಲಿದೆ. ತಾಳ್ಮೆಯಿರಲಿ.

ಕರ್ಕಟಕ: ಕಾರ್ಯರಂಗದಲ್ಲಿ ಅಧಿಕ ಚಟವಟಿಕೆಯಿಂದ ಒತ್ತಡ ಹೆಚ್ಚಾದೀತು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲು ಕೊಂಚ ತಡವಾದೀತು.

ಸಿಂಹ: ಎಷ್ಟೇ ಪ್ರಯತ್ನಪಟ್ಟರೂ ಅಂದುಕೊಂಡಿದ್ದು ಆಗದೇ ಇರಬಹುದು. ಹಾಗಂತ ನಿರಾಸೆ ಬೇಡ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ಮಾತುಗಳು ಇತರರ ನಿಷ್ಠುರಕ್ಕೆ ಕಾರಣವಾದೀತು.

ಕನ್ಯಾ: ನಿಮ್ಮ ವಿಚಾರಧಾರೆಗಳಿಗೆ ಮನೆಯವರ ಸಹಮತ ಕಂಡುಬರಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರುವುದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಚಿಂತೆ ಬೇಡ.

ತುಲಾ: ಸ್ವಯಂ ವ್ಯಾಪಾರ, ವ್ಯವಹಾರ ಮಾಡುವವರಿಗೆ ತೊಂದರೆಗಳು ಎದುರಾದೀತು. ನಯವಂಚಕರ ಮಾತಿಗೆ ಮರುಳಾಗಬೇಡಿ. ಧನಾದಾಯ ವೃದ್ಧಿಗಾಗಿ ನಾನಾ ದಾರಿಗಳ ಬಗ್ಗೆ ಚಿಂತನೆ ನಡೆಲಿಸಲಿದ್ದೀರಿ.

ವೃಶ್ಚಿಕ: ಇಂದು ನೀವು ಅಂದುಕೊಂಡ ವಸ್ತು ಖರೀದಿಗೆ ಶುಭ ದಿನ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಬೇರೆಯವರ ವಿಚಾರಗಳಿಗೆ ತಲೆ ಹಾಕಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ವೃತ್ತಿರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ವಿದ್ಯಾರ್ಥಿಗಳಿಗೆ ಹೊಸ ಪುಸ್ತಕ ಖರೀದಿ ಯೋಗ.

ಮಕರ: ಉದ್ಯೋಗ ಬದಲಾವಣೆಗೆ ನೀವು ಮಾಡುವ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಿಗಬೇಕಾದರೆ ಕುಲದೇವರ ಪ್ರಾರ್ಥನೆ ಮಾಡುವುದು ಉತ್ತಮ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾಗುವ ಸಂಭವ. ಆಪ್ತರೊಂದಿಗೆ ಕಾಲ ಕಳೆಯಲು ಮನಸ್ಸು ಹಾತೊರೆಯಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮಾನಸಿಕವಾಗಿ ಉಲ್ಲಾಸದಾಯಕ ದಿನವಾಗಿರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments