ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 20 ಮೇ 2022 (08:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ನಡತೆಯಿಂದಲೇ ನಿಮ್ಮ ಎದುರಾಳಿಗಳಿಗೆ ತಕ್ಕ ಉತ್ತರ ನೀಡಲಿದ್ದೀರಿ. ಆತ್ಮವಿಶ್ವಾಸವೇ ನಿಮ್ಮ ಬಲವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸುವಿರಿ.

ವೃಷಭ: ನಿಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಪ್ರಯತ್ನಿಸಲಿದ್ದೀರಿ. ಕಾರ್ಯರಂಗದಲ್ಲಿ ವಿಶ್ವಾಸಘಾತುಕರ ಬಗ್ಗೆ ಎಚ್ಚರವಾಗಿರಿ. ನಿಮ್ಮನ್ನು ಪ್ರೀತಿಸುವವರನ್ನು ಹಗುರವಾಗಿ ಕಾಣಬೇಡಿ. ಸಂಬಂಧಗಳ ಬಗ್ಗೆ ಎಚ್ಚರ.

ಮಿಥುನ: ಕಾರ್ಯರಂಗದಲ್ಲಿ ನಿಮಗೆ ಎದುರಾಗುವ ಅನಾನುಕೂಲಗಳಿಗೆ ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ವ್ಯಾಪಾರಿಗಳಿಗೆ ಉನ್ನತಿಯ ಯೋಗವಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಸಾಂಸಾರಿಕವಾಗಿ ನಿಮ್ಮ ಮಾತಿನ ಮೇಲೆ ಹಿಡಿತವಿಲ್ಲದೇ ಇದ್ದರೆ ಭಿನ್ನಾಭಿಪ್ರಾಯಗಳು ಮೂಡೀತು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತೋಷವಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಬೇರೆಯವರು ನಿಮ್ಮ ವ್ಯವಹಾರಗಳಲ್ಲಿ ಮೂಗು ತೂರಿಸುವುದು ಕಿರಿ ಕಿರಿ ತಂದೀತು. ಒಂದು ರೀತಿಯಲ್ಲಿ ಅಡಕತ್ತರಿಯಲ್ಲಿ ಸಿಲುಕಿದ ಸ್ಥಿತಿ ನಿಮ್ಮದಾಗಲಿದೆ. ಪ್ರೇಮ ಸಂಬಂಧಗಳಲ್ಲಿ ಬಿರುಕು ಸಾಧ‍್ಯತೆ. ತಾಳ್ಮೆಯಿರಲಿ.

ಕನ್ಯಾ: ಇಂದು ಕೈ ಜಾರಿದ ವಸ್ತು, ಸಂಬಂಧಗಳು ಮುಂದೆ ಮರಳಿ ನಿಮ್ಮ ಬಳಿಗೆ ಬಂದೇ ಬರುತ್ತದೆ ಎಂಬ ವಿಶ್ವಾಸವಿರಲಿ. ಕಾರ್ಯರಂಗದಲ್ಲಿ ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.

ತುಲಾ: ಪ್ರತಿಫಲಾಪೇಕ್ಷೆಯಿಲ್ಲದೇ ಮಾಡುವ ಕೆಲಸಗಳಿಂದ ಪುಣ್ಯ ಪ್ರಾಪ್ತಿಯಾಗಲಿದೆ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗ ಕೂಡಿಬರುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಹಿರಿಯರಿಗೆ ನಿಮ್ಮ ಮಾತು, ವರ್ತನೆ ಸಂತೋಷ ತಂದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾ ಬರಲಿವೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ಹಿಂದೆ ಮಾಡಿದ ತಪ್ಪು ಪುನರಾವರ್ತನೆಯಾಗಲು ಬಿಡಬೇಡಿ. ವ್ಯಾಪಾರೀ ವರ್ಗದವರಿಗೆ ಹಿನ್ನಡೆಯಾದೀತು. ಆಪ್ತರೊಂದಿಗೆ ನಿಮ್ಮ ಕಷ್ಟ ಹಂಚಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಕುಲದೇವರ ಪ್ರಾರ್ಥನೆಯೊಂದಿಗೆ ಇಂದಿನ ದಿನದಾರಂಭ ಮಾಡುವುದರಿಂದ ಎಲ್ಲವೂ ಶುಭವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆಯಿರುವುದು.

ಕುಂಭ: ಕೈಲಾಗದು ಎಂದು ಪ್ರಯತ್ನವೇ ಪಡದೇ ಉದಾಸೀನ ಪ್ರವೃತ್ತಿ ತೋರಿಸಬೇಡಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆಯಿರಲಿದೆ. ಚಿಂತೆ ಬೇಡ.

ಮೀನ: ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದ್ದು, ಸುಖ ಪ್ರಾಪ್ತಿಯಾಗಲಿದೆ. ವಾಹನ, ಭೂಮಿ ಖರೀದಿ ವಿಚಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments