ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ನಿಮ್ಮ ಎದುರು ಬರುವ ಸವಾಲುಗಳನ್ನು ಮೀರಿ ನಿಲ್ಲಲು ಪಯತ್ನ ನಡೆಸಲಿದ್ದೀರಿ. ದೇಹಾರೋಗ್ಯದಲ್ಲಿ ಸಣ್ಣ ಮಟ್ಟಿನ ತೊಂದರೆಯಾದೀತು. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ನಿರೀಕ್ಷೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.
ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬ ಸದಸ್ಯರ ಸಹಕಾರವಿರಲಿದ್ದು, ಸುಗಮವಾಗಿ ಕಾರ್ಯ ನೆರವೇರಿಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭವಾಗಲಿದೆ.
ಮಿಥುನ: ನಿಮ್ಮ ಧೈರ್ಯ, ಜಾಣ್ಮೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗವಿದ್ದು, ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.
ಕರ್ಕಟಕ: ನೀವು ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿಯಾಗಲಿದೆ. ಆಗುವುದೆಲ್ಲವೂ ಒಳ್ಳೆಯದಕ್ಕೆ ಎಂಬ ಆಶಾಭಾವನೆ ಇರಲಿ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಸಿಂಹ: ಮಾನಸಿಕವಾಗಿ ಒತ್ತಡಕ್ಕೆ ಒಳಗಾಗದಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಹಣಕಾಸಿನ ಉಳಿತಾಯವಾಗಲಿದೆ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಕನ್ಯಾ: ಸಾಂಸಾರಿಕವಾಗಿ ಸುಖ, ನೆಮ್ಮದಿಯಾಗಲಿದೆ. ಆಸ್ತಿ ವಿಚಾರದಲ್ಲಿ ದಾಯಾದಿಗಳೊಂದಿಗೆ ವೈಮನಸ್ಯಗಳಾದೀತು. ಹಿರಿಯರ ಮಾತಿಗೆ ಕಿವಿಗೊಡಬೇಕಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.
ತುಲಾ: ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿಯಿದ್ದರೂ, ಸನ್ಮಿತ್ರರ ಸಹಕಾರ ಸಿಗಲಿದೆ. ದೈಹಿಕ ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಗುರುಹಿರಿಯರಲ್ಲಿ ಸಮಾಧಾನದಿಂದ ವರ್ತಿಸಿ. ತಾಳ್ಮೆಯಿರಲಿ.
ವೃಶ್ಚಿಕ: ಬೇರೆಯವರು ನಿಮ್ಮ ಜೀವನದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾದೀತು. ಸಂಯಮವಿರಲಿ.
ಧನು: ಒಳ್ಳೆಯ ಕೆಲಸ ಮಾಡಲು ಕೆಲವು ದಿನ ಕಾಯುವುದು ಉತ್ತಮ. ಆತ್ಮೀಯರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ವ್ಯಾಪಾರಿಗಳಿಗೆ ಮುನ್ನಡೆಯಿರಲಿದೆ.
ಮಕರ: ನಿಮ್ಮ ಭವಿಷ್ಯದ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇರಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಯಶಸ್ಸು ಸಿಗಲಿದೆ. ಆತ್ಮೀಯರು ಕೊಡುವ ಒಳ್ಳೆಯ ಸಲಹೆಗಳನ್ನು ಪಾಲಿಸುವುದು ಉತ್ತಮ.
ಕುಂಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲದ್ದೀರಿ. ಮನೆಯಲ್ಲಿ ಶುಭಮಂಗಲ ಕಾರ್ಯ ನೆರವೇರಿಸುವಿರಿ. ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಸಂತೋಷದಾಯಕವಾದ ದಿನವಾಗಿರಲಿದೆ.
ಮೀನ: ಸರಕಾರಿ ಕೆಲಸಗಳಲ್ಲಿ ಮಂದಗತಿಯಿದ್ದರೂ ಅಂದುಕೊಂಡ ಕೆಲಸ ನೆರವೇರಲಿದೆ. ಪಾಲುದಾರಿಕೆ ಕ್ಷೇತ್ರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳಿಂದ ಸುಖ, ಸಂತೋಷ ವೃದ್ಧಿಯಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾದೀತು.