Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 3 ಜೂನ್ 2022 (07:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿ ವರ್ಗದವರಿಗೆ, ಸಾಮಾಜಿಕವಾಗಿ ನಾಯಕತ್ವ ವಹಿಸಿಕೊಂಡವರಿಗೆ ಕೀರ್ತಿ ಸಂಪಾದಿಸುವ ಯೋಗ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನೂತನ ಮಿತ್ರರ ಸಮಾಗಮ. ಸಂತೋಷವಿರಲಿದೆ.

ವೃಷಭ: ನಿಮ್ಮ ಅರಿವಿದ್ದೋ ಇಲ್ಲದೆಯೋ ಪುಣ್ಯದ ಕೆಲಸವೊಂದು ನಡೆದುಹೋಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮಿಥುನ: ಆರೋಗ್ಯದ ಬಗ್ಗೆ ತುಸು ಕಾಳಜಿ ವಹಿಸಿದರೆ ಉತ್ತಮ. ಇತರರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೆ ಕೆಲವೊಮ್ಮೆ ಕಿವಿಗೊಡಬೇಕಾಗುತ್ತದೆ. ಮಹಿಳೆಯರಿಗೆ ವಸ್ತ್ರಾಭರಣಾದಿ ಖರೀದಿ ಯೋಗ. ತಾಳ್ಮೆಯಿರಲಿ.

ಕರ್ಕಟಕ: ನಿಮ್ಮ ಭವಿಷ್ಯದ ಬಗ್ಗೆ ಹೊಸ ಆಶಾಕಿರಣ ಸಿಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಶ ಸಿಗುವುದು. ಯೋಗ್ಯ ವಯಸ್ಕರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು.

ಸಿಂಹ: ಕಷ್ಟದಲ್ಲಿದ್ದವರಿಗೆ ನಿಮ್ಮ ಕೈಲಾದ ನೆರವು ನೀಡಲಿದ್ದೀರಿ. ಕೌಟುಂಬಿಕವಾಗಿ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಚರ್ಚಿಸಿ. ಮಹಿಳೆಯರಿಗೆ  ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗುವುದು.

ಕನ್ಯಾ: ವೈಯಕ್ತಿಕವಾಗಿ ನಿಮ್ಮ ಕಷ್ಟಗಳಿಗೆ ಆಪ್ತರ ನೆರವು ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳಿಂದ ಸಂತೋಷ ಸಿಗುವುದು. ಚಿಂತೆ ಬೇಡ.

ತುಲಾ: ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಸೂಕ್ತ ದಾರಿ ಸಿಗದೇ ನಿರಾಸೆಯಾದೀತು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ವೃಶ್ಚಿಕ: ವಯಸ್ಸಿನಲ್ಲಿ ನಿಮ್ಮಿಂದ ಕಿರಿಯರಾದರೂ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಖುಷಿ ನೀಡಲಿದ್ದೀರಿ. ಸಹೋದರರಿಂದ ಸುಖ, ಸಂತೋಷ ಸಿಗುವುದು.

ಧನು: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ದೇವತಾ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಭೂಮಿ, ವಾಹನಾದಿ ಸುಖ ನಿಮ್ಮದಾಗಲಿದೆ.

ಮಕರ: ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯುವುದು.

ಕುಂಭ: ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ. ಕೌಟುಂಬಿಕವಾಗಿ ಸುಖ,ಶಾಂತಿಗೆ ಭಂಗ ತರುವ ಘಟನೆಗಳಾದೀತು. ತಾಳ್ಮೆ, ಸಂಯಮ ಅಗತ್ಯ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಉದ್ಯೋಗ ಸಂಬಂಧವಾದ ಸಮಸ್ಯೆಗಳಿಗೆ ಆಪ್ತರಿಂದ ಪರಿಹಾರ ಸಿಗಲಿದೆ. ಮಾನಸಿಕವಾಗಿ ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಗಳು ಕಾಡೀತು. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಡೇ ಸಾತಿ ಶನಿ ಇರುವವರು ಇಂದು ತಪ್ಪದೇ ಈ ಮಂತ್ರ ಜಪಿಸಿ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments