Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 8 ಜೂನ್ 2022 (09:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವೈವಾಹಿಕ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ಆಪ್ತರನ್ನು ಭೇಟಿಯಾಗಲಿದ್ದು ಮನಸ್ಸಿಗೆ ಸಂತೋಷ ಸಿಗಲಿದೆ. ಉನ್ನತಾಧಿಕಾರಿಗಳಿಗೆ ಜವಾಬ್ಧಾರಿ ಹೆಚ್ಚೀತು. ಆರ್ಥಿಕವಾಗಿ ಜಾಗರೂಕತೆಯಿಂದ ಖರ್ಚು ವೆಚ್ಚ ಮಾಡಿದರೆ ಉತ್ತಮ.

ವೃಷಭ: ಅನಿವಾರ್ಯ ಕಾರಣಗಳಿಗೆ ನಿಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಪರರ ನಿಂದನೆಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸಂಗಾತಿಯ ವಿಶ್ವಾಸಕ್ಕೆ ಪಾತ್ರರಾಗಲಿದ್ದೀರಿ. ತಾಳ್ಮೆಯಿರಲಿ.

ಮಿಥುನ: ನಿಮ್ಮ ತಪ್ಪುಗಳಿಗೆ ಇತರರನ್ನು ಹೊಣೆ ಮಾಡುವ ಪ್ರವೃತ್ತಿ ಬೇಡ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಇನ್ನೊಬ್ಬರಿಗೆ ಸದುಪಯೋಗವಾಗುವ ಕೆಲಸ ಮಾಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಪಾಲು ಬಂಡವಾಳ ಹೂಡಿಕೆ ಮಾಡಲು ಸಕಾಲ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವರ ಪ್ರಾರ್ಥನೆ ಮಾಡಿ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಮುನ್ನಡೆಯನ್ನು ಯಾರಿಗೂ ತಡೆಯಲಾಗದು. ಆರ್ಥಿಕವಾಗಿ ಸಬಲರಾಗಲಿದ್ದೀರಿ. ಉದ್ದಿಮೆದಾರರಿಗೆ ಅಭಿವೃದ್ಧಿಗೆ ಅವಕಾಶ ಕಂಡುಬರಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶವನ್ನು ಬಳಸಿಕೊಳ್ಳಬೇಕು.

ಕನ್ಯಾ: ಅಗತ್ಯ ಸಂದರ್ಭದಲ್ಲಿ ಗುರುಹಿರಿಯರ ಸಹಾಯ ಕಂಡುಬರಲಿದೆ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿವೆ. ಸಹೋದರಾದಿ ವರ್ಗದವರ ಪ್ರೀತಿಗೆ ಪಾತ್ರರಾಗಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ತುಲಾ: ಅನೇಕ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಹೊಸ ಮಿತ್ರರನ್ನು ಸಂಪಾದಿಸುವ ಯೋಗ. ಕೌಟುಂಬಿಕವಾಗಿ ಜವಾಬ್ಧಾರಿಯುತವಾಗಿ ನಡೆದುಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ವೃಶ್ಚಿಕ: ಕಚೇರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಮೇಲಧಿಕಾರಿಗಳಿಗೆ ನಿಮ್ಮ ಅನಿವಾರ್ಯತೆ ಅನುಭವಕ್ಕೆ ಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕಿರು ಓಡಾಟ ನಡೆಸಲಿದ್ದೀರಿ.

ಧನು: ವ್ಯವಹಾರ ಸಂಬಂಧವಾಗಿ ಪರವೂರಿಗೆ ಸಂಚಾರ ಮಾಡುವ ಅನಿವಾರ್ಯತೆ ಎದುರಾಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಶಿಕ್ಷಕ ವೃಂದದವರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ಚಿಂತೆ ಬೇಡ.

ಮಕರ: ನಿಮ್ಮ ವೈಯಕ್ತಿಕ ಕೆಲಸಗಳಿಗೆ ಪರರನ್ನು ಅವಲಂಬಿಸುವ ಪರಿಸ್ಥಿತಿ ಎದುರಾಗಲಿದೆ. ವಿವೇಚನೆಯಿಂದ ಕಾರ್ಯನಿರ್ವಹಿಸಿದಲ್ಲಿ ಯಶಸ್ವಿಯಾಗುವಿರಿ. ಕ್ರಯ ವಿಕ್ರಯ ವ್ಯವಹಾರಗಳಲ್ಲಿ ಲಾಭ ಕಂಡುಕೊಳ‍್ಳಲಿದ್ದೀರಿ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಪರಿಶ್ರಮವಿದ್ದರೂ ಅದಕ್ಕೆ ತಕ್ಕ ಫಲ ಸಿಗದೇ ಬೇಸರವಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಮೀನ: ಬಂಧು ಮಿತ್ರರಲ್ಲಿ ತಾಳ್ಮೆಯಿಂದ ವ್ಯವಹರಿಸುವುದು ಉತ್ತಮ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ಸಾಮಾಜಿಕ ಕೆಲಸಗಳಿಂದ ನೆಮ್ಮದಿ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Baba Vanga: ಬಾಬಾ ವಂಗಾ ಭವಿಷ್ಯವಾಣಿ ಪ್ರಕಾರ 2025 ಈ 3 ರಾಶಿಯವರು ಶ್ರೀಮಂತರಾಗುತ್ತಾರೆ

Horoscope 2025: ಮಕರ ರಾಶಿಯವರಿಗೆ 2025 ರಲ್ಲಿ ಕೌಟುಂಬಿಕವಾಗಿ ಚಿಂತೆ ಬೇಡ

Horoscope 2025: ಧನು ರಾಶಿಯವರಿಗೆ 2025 ರಲ್ಲಿ ಕೌಟುಂಬಿಕವಾಗಿ ಏನು ಫಲ

Horoscope 2025: ವೃಶ್ಚಿಕ ರಾಶಿಯವರಿಗೆ 2025 ರ ಆರಂಭ ಅನುಕೂಲಕರವಾಗಿದೆ

Horoscope 2025: ತುಲಾ ರಾಶಿಯವರಿಗೆ 2025 ರಲ್ಲಿ ಕೌಟುಂಬಿಕವಾಗಿ ಯಾವ ಫಲ

ಮುಂದಿನ ಸುದ್ದಿ
Show comments