Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 9 ಜೂನ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉನ್ನತ ಹಂತಕ್ಕೇರುವ ನಿಮ್ಮ ಪ್ರಯತ್ನಕ್ಕೆ ಅಡ್ಡಿ ಆತಂಕಗಳು ಎದುರಾದೀತು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೊಗಲಿದ್ದೀರಿ. ಗೃಹಿಣಿಯರಿಗೆ ಕೆಲಸದೊತ್ತಡ ಹೆಚ್ಚಾಗಲಿದೆ. ಸಂಗಾತಿಯ ಸಹಕಾರ ನೆಮ್ಮದಿ ನೀಡಲಿದೆ.

ವೃಷಭ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಭಾಗಶಃ ಯಶಸ್ಸು ಸಾಧಿಸಲಿದ್ದೀರಿ. ದೇವರ ಪ್ರಾರ್ಥನೆ ಮಾಡಿ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಎದುರಾಳಿಗಳನ್ನು ಮೀರಿ ಮುನ್ನಡೆ ಸಾಧಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಿರದಿದ್ದರೂ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಯಾವುದೇ ನಿರ್ಧಾರಕ್ಕೆ ಮುನ್ನ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ಯಶಸ್ಸಿನ ಹಾದಿಯಲ್ಲಿ ಅಡೆತಡೆಗಳೂ ಸಾಮಾನ್ಯ. ಆತ್ಮವಿಶ್ವಾಸದಿಂದ ಎದುರಿಸಿ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಸಿಂಹ: ವ್ಯಾವಹಾರಿಕವಾಗಿ ಪ್ರಯೋಗ ಮಾಡಲು ಹೋಗಿ ಕೈ ಸುಟ್ಟುಕೊಳ್ಳುವ ಸ್ಥಿತಿ ನಿಮ್ಮದಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ದಿನ ಕಾಯುವುದು ಉತ್ತಮ.

ಕನ್ಯಾ: ವೈಯಕ್ತಿಕವಾಗಿ ನಿಮ್ಮ ನಡೆ ನುಡಿಗಳಲ್ಲಿ ಕೆಲವು ಬದಲಾವಣೆಗಳಾಗಲಿವೆ. ಸಹೋದ್ಯೋಗಿಗಳ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಸಾಂಸಾರಿಕ ಜಂಜಾಟಗಳಲ್ಲಿ ಮುಳುಗಿ ಹೋಗಲಿದ್ದೀರಿ. ನಿಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಪ್ರಯತ್ನ ನಡೆಸಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ವೃಶ್ಚಿಕ: ಕೆಲಸದ ವಿಚಾರದಲ್ಲಿ ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ ಕಂಡುಬಂದೀತು. ಕೌಟುಂಬಿಕವಾಗಿ ಸಂಗಾತಿಯ ಸಹಕಾರವಿರಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ತೊಡಗಿಸಿಕೊಂಡವರಿಗೆ ಹಿತಶತ್ರುಗಳ ಕಾಟ. ತಾಳ್ಮೆಯಿರಲಿ.

ಧನು: ಒಳ್ಳೆಯ ದಿನಕ್ಕಾಗಿ ನೀವು ಕಾಯುತ್ತಿದ್ದ ಗಳಿಗೆ ಕೊನೆಗೂ ಕೂಡಿಬರಲಿದೆ. ಆಸ್ತಿ, ವಾಹನ ಖರೀದಿಗೆ ಮುಂದಾಗುವಿರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಪಾಲುದಾರಿಕೆ ವ್ಯವಹಾರಗಳಲ್ಲಿ ಬಂಡವಾಳ ಹೂಡಲಿದ್ದೀರಿ.

ಮಕರ: ಅಪರಿಚಿತ ವ್ಯಕ್ತಿಗಳಿಂದಲೂ ಇಂದು ನಿಮ್ಮ ಕೆಲಸಕ್ಕೆ ಸಹಾಯವಾಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಕುಂಭ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವೈಯಕ್ತಿಕವಾಗಿ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದಾಂಪತ್ಯ ಸುಖಕ್ಕೆ ಕೊರತೆಯಿರದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಮೀನ: ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಸಹೋದರರೊಂದಿಗೆ ಸಂಬಂಧ ಸುಧಾರಿಸಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments