Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 10 ಜೂನ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗಲಿದ್ದು, ಒಂದು ರೀತಿಯ ಕಿರಿ ಕಿರಿ ಅನುಭವಿಸಲಿದ್ದೀರಿ. ನಿಮ್ಮ ಕಷ್ಟಗಳಿಗೆ ಸಂಗಾತಿಯ ಸಾಥ್ ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ವೃಷಭ: ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವೆನಿಸಬಹುದು. ಮಾತಿನ ಮೇಲೆ ನಿಗಾ ಇರಲಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವ್ಯವಹಾರ ಚತುರತೆಯಿಂದ ಆರ್ಥಿಕವಾಗಿ ಲಾಭ ಕಂಡುಕೊಳ್ಳಲಿದ್ದೀರಿ.

ಮಿಥುನ: ಮಹಿಳೆಯರು ಉದ್ಯೋಗ ಕ್ಷೇತ್ರದಲ್ಲಿ ಕೀರ್ತಿ ಸಂಪಾದಿಸಲಿದ್ದು, ಕೌಟುಂಬಿಕವಾಗಿ ಮಹಾಲಕ್ಷ್ಮಿಯಾಗಲಿದ್ದಾಳೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆ.

ಕರ್ಕಟಕ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಸದಭಿಪ್ರಾಯ, ಚಿಂತನೆಗಳಿಗೆ ಮನ್ನಣೆ ಕೊಡಿ. ಗುರುಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿವೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಸಿಂಹ: ಅಂದುಕೊಂಡಿದ್ದೆಲ್ಲಾ ವಾಸ್ತವದಲ್ಲಿ ನಡೆಸಲು ಸಾಧ‍್ಯವಿಲ್ಲ ಎಂಬ ಸತ್ಯ ಅರಿವಾಗಲಿದೆ. ಬೇರೆಯವರ ಬಗ್ಗೆ ಚಾಡಿ ಮಾತು ಸಲ್ಲದು. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಸಂತೋಷದ ಕ್ಷಣಗಳನ್ನು ಪ್ರೀತಿ ಪಾತ್ರರೊಂದಿಗೆ ಕಳೆಯಲು ಮನಸ್ಸು ಹಾತೊರೆಯಲಿದೆ. ಆಸ್ತಿ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ. ವೃತ್ತಿರಂಗದಲ್ಲಿ ಸ್ಪರ್ಧಾತ್ಮಕ ಮನೋಭಾವ ಕಂಡುಬರಲಿದೆ.

ತುಲಾ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹಿಂದೆ ಆಗಿ ಹೋದ ಘಟನೆಗಳ ಬಗ್ಗೆ ಚಿಂತಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹೊಸದಾಗಿ ಪರಿಚಯವಾಗುವ ವ್ಯಕ್ತಿಯಿಂದ ಲಾಭವಾದೀತು.

ವೃಶ್ಚಿಕ: ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ. ವಿದ್ಯಾರ್ಥಿಗಳಿಗೆ ಅಧ‍್ಯಯನ ನಿಮಿತ್ತ ಪರವೂರಿಗೆ ಸಂಚರಿಸುವ ಯೋಗ. ತಾಳ್ಮೆ, ಸಂಯಮವಿರಲಿ.

ಧನು: ನಿಮ್ಮ ಹೊಸ ಥರದ ಯೋಜನೆಗಳಿಗೆ ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ಕೈಗೊಳ್ಳುವ ಕಾರ್ಯಗಳಲ್ಲಿ ಯಶಸ್ಸು ಸಿಗಬೇಕಾದರೆ ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಆಸ್ತಿ ವಿಚಾರದಲ್ಲಿ ಮುನ್ನಡೆ ಸಿಗಲಿದೆ. ಅವಿವಾಹಿತರು ಸಂಗಾತಿಯ ಆಯ್ಕೆ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.

ಕುಂಭ: ವೃತ್ತಿಸಂಬಂಧವಾದ ಸಮಸ್ಯೆಗಳಿಂದ ಮಾನಸಿಕವಾಗಿ ಕಿರಿ ಕಿರಿ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರುವುದು. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಮಕ್ಕಳ ಭವಿಷ್ಯದ ವಿಚಾರವಾಗಿ ಸಂಗಾತಿಯೊಂದಿಗೆ ಚರ್ಚೆ ನಡೆಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ