Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 11 ಜೂನ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೂರದ ವ್ಯವಹಾರದಿಂದ ಧನಾದಾಯ ವೃದ್ಧಿಯಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಕಡೆಗೆ ಗಮನವಿರಲಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ವೃಷಭ: ಹೊಸ ವಿದ್ಯೆಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಹಳೆಯ ಮಿತ್ರರನ್ನು ಭೇಟಿ ಮಾಡುವ ಯೋಗ. ಮಕ್ಕಳ ವಿಚಾರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ಗುರುಹಿರಿಯರ ಮಾತಿಗೆ ಕಿವಿಗೊಡುವುದು ಉತ್ತಮ. ತಾಳ್ಮೆಯಿರಲಿ.

ಮಿಥುನ: ನಿಮ್ಮ ಮನಸ್ಸಿಗೆ ಹತ್ತಿರವಾದವರಿಂದಲೇ ಆಘಾತ ಅನುಭವಿಸುವ ಸಾಧ‍್ಯತೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ. ಧಾರ್ಮಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಮುನ್ನಡೆಯ ಯೋಗ. ಹೊಸ ಜನರ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾಗಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆಯಿದೆ.

ಸಿಂಹ: ಅಧ‍್ಯಯನ ಶೀಲರಿಗೆ ಉತ್ತಮ ಮನ್ನಣೆ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ದೈಹಿಕವಾಗಿ ಆರೋಗ್ಯವಿದ್ದರೂ ಮಾನಸಿಕವಾಗಿ ಒತ್ತಡ ಕಂಡುಬಂದೀತು.

ಕನ್ಯಾ: ಮಕ್ಕಳ ಸಂತೋಷದ ಕ್ಷಣಗಳಲ್ಲಿ ಭಾಗಿಯಾಗಲಿದ್ದೀರಿ. ಹಿರಿಯರ ದೇಹಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಅಲೆದಾಡಬೇಕಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಮನಸ್ಸಿನಲ್ಲಿರುವ ಭಾರವನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಧನಾದಾಯ ವೃದ್ಧಿಯಾಗಲಿದ್ದು, ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹಿತಚಿಂತಕರ ಮಾತುಗಳಿಗೆ ಬೆಲೆಕೊಡುವುದು ಉತ್ತಮ. ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಕೈಗೊಳ್ಳುವ ಯೋಗವಿದೆ.

ಧನು: ಮನೆಯಲ್ಲಿ ಸುಖ, ಶಾಂತಿಯಿರಲಿದ್ದು, ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಸಂಗಾತಿಯಿಂದ ಸುಖ ಪ್ರಾಪ್ತಿಯಾದೀತು.

ಮಕರ: ವಸ್ತು ಸ್ಥಿತಿ ಅರಿತು ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ ಕಂಡುಬರಲಿದೆ. ಗೃಹೋಪಕರಣಗಳ ಖರೀದಿಗಾಗಿ ಖರ್ಚು ವೆಚ್ಚಗಳು ಕಂಡುಬಂದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ವಿವೇಚನೆಯಿಂದ ಕೆಲಸ ಮಾಡುವುದರಿಂದ ಲಾಭ ಪಡೆದುಕೊಳ್ಳಬಹುದು. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗ. ಪ್ರವಾಸೀ ತಾಣಗಳ ಸಂದರ್ಶನ ಯೋಗವಿದೆ.

ಮೀನ: ಸ್ವಯಂ ವ್ಯಾಪಾರಿಗಳಿಗೆ ಅನ್ಯರ ಸಹಾಯದಿಂದ ಅಭಿವೃದ್ಧಿ ಕಂಡುಬಂದೀತು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments