Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 13 ಜೂನ್ 2022 (08:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಚತುರತೆಯಿಂದ ಕಾರ್ಯನಿರ್ವಹಿಸುವುದರಿಂದ ಕಾರ್ಯರಂಗದಲ್ಲಿ ಯಶಸ್ಸು ಸಾಧ್ಯ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಧನಾರ್ಜನೆಗೆ ನಾನಾ ದಾರಿಗಳು ಕಂಡುಬರಲಿದೆ. ಸರಕಾರಿ ಕೆಲಸ ಕಾರ್ಯಗಳಿಗೆ ಓಡಾಟ ನಡೆಸಬೇಕಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಮಿಥುನ: ಕಾರ್ಯರಂಗದಲ್ಲಿ ನಿರೀಕ್ಷಿತ ಸ್ಥಾನ ಮಾನ ಲಭ್ಯವಾಗಲಿದೆ. ಕೆಲಸ ಕಾರ್ಯಗಳಲ್ಲಿ ಗುರುಹಿರಿಯರ ಪ್ರೋತ್ಸಾಹ ಸಿಗುವುದು. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ನೆಂಟರಿಷ್ಟರ ಆಗಮನ ಸಾಧ‍್ಯತೆ.

ಕರ್ಕಟಕ: ನಿಮ್ಮ ಮುಂದಿನ ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ಕೈಗೊಳ್ಳಲಿದ್ದೀರಿ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ಭೂಮಿ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ. ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸಿಗೆ ವಿಘ್ನಗಳು ಬಂದೀತು. ವ್ಯಾಪಾರಿಗಳಿಗೆ ವಂಚನೆಯ ಭೀತಿಯಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಕನ್ಯಾ: ಅಧಿಕ ಧನಾರ್ಜನೆ ಮಾಡುವ ಪ್ರಯತ್ನ ಮಾಡಲಿದ್ದೀರಿ. ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಹಿಳೆಯರಿಗೆ ಚರ್ಮ ಸಂಬಂಧೀ ಅರೋಗ್ಯ ಸಮಸ್ಯೆಯಾದೀತು. ಎಚ್ಚರಿಕೆ ಅಗತ್ಯ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ವೈಯಕ್ತಿಕ ಜೀವನದಲ್ಲಿ ಇತರರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ.

ಧನು: ಆಸ್ತಿ ವಿಚಾರದಲ್ಲಿ ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ: ಮಾನಸಿಕವಾಗಿ ಕಾಡುತ್ತಿದ್ದ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಹಿರಿಯರಿಗೆ ಸಾಮಾಜಿಕ ಕೆಲಸಗಳಿಂದ ನೆಮ್ಮದಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಕುಂಭ: ವ್ಯಾಪಾರ, ವ್ಯವಹಾರಗಳಲ್ಲಿ ಹೊಂದಾಣಿಕೆಯಿಂದ ನಡೆದುಕೊಂಡರೆ ಲಾಭ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಸಾಂಸಾರಿಕವಾಗಿ ಮಧ್ಯಮ ಸುಖವಿರಲಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಮೀನ: ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಅಲಕ್ಷ್ಯ ಮಾಡಬೇಡಿ. ವಿಶೇಷವಾದ ವ್ಯಕ್ತಿಗಳ ಭೇಟಿಯಾಗಲಿದ್ದು ಕಾರ್ಯಾನುಕೂಲವಾಗಲಿದೆ. ಉದ್ಯೋಗ ಬದಲಾವಣೆ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments