Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 17 ಜೂನ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವೈವಾಹಿಕ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ಆಪ್ತರನ್ನು ಭೇಟಿಯಾಗಲಿದ್ದು ಮನಸ್ಸಿಗೆ ಸಂತೋಷ ಸಿಗಲಿದೆ. ಉನ್ನತಾಧಿಕಾರಿಗಳಿಗೆ ಜವಾಬ್ಧಾರಿ ಹೆಚ್ಚೀತು. ಆರ್ಥಿಕವಾಗಿ ಜಾಗರೂಕತೆಯಿಂದ ಖರ್ಚು ವೆಚ್ಚ ಮಾಡಿದರೆ ಉತ್ತಮ.

ವೃಷಭ: ಅನಿವಾರ್ಯ ಕಾರಣಗಳಿಗೆ ನಿಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಪರರ ನಿಂದನೆಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸಂಗಾತಿಯ ವಿಶ್ವಾಸಕ್ಕೆ ಪಾತ್ರರಾಗಲಿದ್ದೀರಿ.

ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ. ಕೈಗೊಂಡ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ಕಂಡುಬರಲಿದೆ. ವಾಣಿಜ್ಯೋದ್ಯಮಿಗಳಿಗೆ ಮುನ್ನಡೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಪ್ರತಿಫಲ.

ಕರ್ಕಟಕ: ಕಾರ್ಯರಂಗದಲ್ಲಿ ಮುನ್ನಡೆ ಸಿಗಬೇಕಾದರೆ ಇನ್ನಷ್ಟು ಪರಿಶ್ರಮ ಪಡಬೇಕಾಗುತ್ತದೆ. ಸಂಗಾತಿಯ ಕೆಲವೊಂದು ಸಲಹೆಗಳು ಉಪಯೋಗಕ್ಕೆ ಬರಲಿದೆ. ಮಕ್ಕಳಿಂದ ನಿಮ್ಮ ಬಲವರ್ಧನೆಯಾಗಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯಚತುರತೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಹಿರಿಯರು ದೇಹಾರೋಗ್ಯದ ಬಗ್ಗೆ ಅಲಕ್ಷಿಸದಿರುವುದು ಉತ್ತಮ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ತಾಳ್ಮೆಯಿರಲಿ.

ಕನ್ಯಾ: ಕೌಟುಂಬಿಕವಾಗಿ ಅಭಿವೃದ್ಧಿಯಿದ್ದರೂ ಕಾರ್ಯರಂಗದಲ್ಲಿ ಅಡೆತಡೆಗಳುಂಟಾದೀತು. ನಿಮ್ಮ ತಾಳ್ಮೆ ಪರೀಕ್ಷೆ ನಡೆಯುವ ಕಾಲ. ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಆಲಿಸುವ ಯೋಗ ನಿಮ್ಮದಾಗಲಿದೆ.

ತುಲಾ: ಹಿರಿಯರಿಗೆ ತೀರ್ಥಯಾತ್ರೆಗೆ ತೆರಳುವ ಯೋಗ ಕೂಡಿಬರುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವಿಶೇಷ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ.

ವೃಶ್ಚಿಕ: ವ್ಯವಸ್ಥಿತವಾಗಿ ಕೆಲಸ ಕಾರ್ಯ ಮಾಡುವುದರಿಂದ ತೊಂದರೆಯಾಗದು. ನಿಮ್ಮ ಕಾರ್ಯವೈಖರಿಯಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ದಾಂಪತ್ಯದಲ್ಲಿ ಮಧ್ಯಮ ಸುಖ. ಕಿರು ಸಂಚಾರ ಮಾಡಲಿದ್ದೀರಿ.

ಧನು: ಮಾನಸಿಕವಾಗಿ ಬದಲಾವಣೆ ಬಯಸಲಿದ್ದೀರಿ. ಪರವೂರಿಗೆ ಸಂಚಾರ ಮಾಡುವ ಯೋಗ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಿಸಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಾತೃ ಸಮಾನರ ಸೇವೆ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕುಂಭ: ಮನಸ್ಸಿನಲ್ಲಿರುವ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಉದ್ಯೋದಲ್ಲಿ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಕುಟುಂಬದವರ ಕ್ಷೇಮಕ್ಕಾಗಿ ವೈಯಕ್ತಿಕ ಸುಖ ತ್ಯಾಗ ಮಾಡಬೇಕಾಗಿ ಬಂದೀತು. ವೃತ್ತಿರಂಗದಲ್ಲಿ ಏಳು ಬೀಳುಗಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆ ರೂಢಿಸಿಕೊಳ್ಳಬೇಕು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ