Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 18 ಜೂನ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಗೃಹೋಪಕರಣಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಸಂಗಾತಿಯ ಕೆಲವೊಂದು ಸಲಹೆಗಳನ್ನು ಸ್ವೀಕರಿಸಬೇಕಾಗುತ್ತದೆ. ವೃತ್ತಿರಂಗದಲ್ಲಿ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ತಾಳ್ಮೆ, ಸಂಯಮ ಅಗತ್ಯ.

ವೃಷಭ: ಶುಭ ಕೆಲಸಗಳು, ಶುಭ ಕಾರ್ಯಗಳನ್ನು ಮಾಡಲು ಕೆಲವು ದಿನ ಕಾಯುವುದು ಉತ್ತಮ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ.

ಮಿಥುನ: ಬೇರೆಯವರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಕರ್ಕಟಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಾಗ ಅಡೆತಡೆ ಸಾಮಾನ್ಯ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ವಿಶೇಷ ನಿರ್ಧಾರ ಕೈಗೊಳ್ಳಲು ಇದು ಸಕಾಲ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸಿಗೆ ತಕ್ಕ ಪ್ರತಿಫಲ ಸಿಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಕನ್ಯಾ: ಹೊಸ ಜನರನ್ನು ಭೇಟಿಯಾಗಲಿದ್ದು, ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ. ನಿಮ್ಮ ಕೆಲಸ ಕಾರ್ಯಗಳಿಗೆ ಯಾವುದೇ ತೊಂದರೆಯಾಗದು. ಸ್ವಯಂ ವ್ಯಾಪಾರಿಗಳಿಗೆ ಉನ್ನತಿಯ ಯೋಗವಿದೆ. ಆತ್ಮವಿಶ್ವಾಸವಿರಲಿ.

ತುಲಾ: ಮಹಿಳೆಯರಿಗೆ ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಆರ್ಥಿಕವಾಗಿ ನಿಮ್ಮ ಸ್ಥಿತಿ ಗತಿಗಳು ಸುಧಾರಿಸಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಮುನ್ನಡೆಯಿರಲಿದೆ.

ವೃಶ್ಚಿಕ: ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವ ಅನಿವಾರ್ಯತೆ ಎದುರಾಗಲಿದೆ. ವ್ಯಾವಹಾರಿಕವಾಗಿ ಪ್ರಗತಿಯಿದ್ದರೂ ಆತ್ಮೀಯರೊಂದಿಗೆ ಘರ್ಷಣೆಗಳಾಗುವ ಸಾಧ‍್ಯತೆ. ಕಿರು ಸಂಚಾರ ಮಾಡಲಿದ್ದೀರಿ.

ಧನು: ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಜಾಗ್ರತೆ ವಹಿಸಬೇಕಾಗುತ್ತದೆ. ಹಿತಶತ್ರುಗಳಿಂದ ದೂರವಿದ್ದರೆ ಉತ್ತಮ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಪರಾಮರ್ಶಿಸಿದರೆ ಉತ್ತಮ. ಅನಿರೀಕ್ಷಿತ ಧನಾಗಮನ ಸಾಧ‍್ಯತೆ.

ಮಕರ: ಸಮಯಕ್ಕೆ ಸರಿಯಾಗಿ ಧನಾಗಮನವಾಗುವುದರಿಂದ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಲಾಭದ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವಿರಿ.

ಕುಂಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕಾರ್ಯಕ್ಷೇತ್ರಗಳಲ್ಲಿ ಅಡೆತಡೆಯಿದ್ದರೂ ಅಖತಿಮ ಜಯ ನಿಮ್ಮದಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರಲಿದೆ.

ಮೀನ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ಅವಕಾಶಗಳು ಸಿಗಲಿವೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ