ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಉದ್ಯೋಗ ವ್ಯವಹಾರದಲ್ಲಿ ಅಡಚಣೆಗಳು ಎದುರಾದರೂ ಕುಟುಂಬದವರ ಸಹಕಾರವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ವೃಷಭ: ವ್ಯಾಪಾರೀ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಬಂಧು ಮಿತ್ರರ ಸಹಕಾರ ಕಂಡುಬರಲಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ ಸಿಗಲಿದೆ.
ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಭವಿಷ್ಯದ ಬಗ್ಗೆ ಚಿಂತೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಪ್ರೇಮಿಗಳಿಗೆ ಶುಭದಿನವಾಗಲಿದೆ.
ಕರ್ಕಟಕ: ಹೊಸ ವಸ್ತುಗಳನ್ನು ಖರೀದಿಸಲು ಖರ್ಚು ವೆಚ್ಚ ಮಾಡಲಿದ್ದೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಭೇಟಿ ಸಾಧ್ಯತೆ. ಮಕ್ಕಳಿಗೆ ಶೈಕ್ಷಣಿಕವಾಗಿ ಹೊಸ ಅವಕಾಶಗಳು ಸಿಗಲಿವೆ. ದೂರ ಪ್ರಯಾಣದ ನಿಮಿತ್ತ ತಯಾರಿ ನಡೆಸಲಿದ್ದೀರಿ.
ಸಿಂಹ: ನಿಮ್ಮ ಭವಿಷ್ಯದ ಬಗ್ಗೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಿದ್ದೀರಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.
ಕನ್ಯಾ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಕೊಂಚ ಸುಧಾರಿಸಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಮನೆಯಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.
ತುಲಾ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಇಷ್ಟ ಭೋಜನ ಮಾಡಲಿದ್ದೀರಿ. ಆದರೆ ಆರೋಗ್ಯದ ಬಗ್ಗೆ ಕಾಳಜಿಯಿರಬೇಕು. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ.
ವೃಶ್ಚಿಕ: ಪಾಲುದಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಸಹೋದರ ಸಮಾನರಿಂದ ಸುಖ ಸಂತೋಷ ಸಿಗಲಿದೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಅಗತ್ಯ. ಹೊಸ ಕೆಲಸಕ್ಕೆ ಮುನ್ನ ಗುರುಹಿರಿಯರ ಆಶೀರ್ವಾದ ಪಡೆದುಕೊಳ್ಳಿ.
ಧನು: ಇಲ್ಲ ಸಲ್ಲದ ವಿಚಾರಕ್ಕೆ ಸಂಗಾತಿಯೊಂದಿಗೆ ರಗಳೆ ಮಾಡಿಕೊಳ್ಳುತ್ತೀರಿ. ಮಾತಿನ ಮೇಲೆ ಸಂಯಮವಿರಲಿ. ಮಕ್ಕಳ ವಿಚಾರದಲ್ಲಿ ಶುಭ ಸಮಾಚಾರಗಳು ಕೇಳಿಬರಲಿವೆ. ಆಸ್ತಿ, ವಾಹನ ಖರೀದಿ ವಿಚಾರದಲ್ಲಿ ಆಸಕ್ತಿ ತೋರಿಸಲಿದ್ದೀರಿ.
ಮಕರ: ಕಾರ್ಯರಂಗದಲ್ಲಿ ಹೆಚ್ಚಿನ ಜವಾಬ್ಧಾರಿ ಹಗಲಿಗೇರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಅನಿರೀಕ್ಷಿತ ಖರ್ಚು ವೆಚ್ಚಗಳಾಗುವ ಸಾಧ್ಯತೆಯಿದೆ. ಸಾಂಸಾರಿಕವಾಗಿ ಸುಖ, ನೆಮ್ಮದಿ ನಿಮ್ಮದಾಗಲಿದೆ.
ಕುಂಭ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಸಾಧ್ಯತೆಯಿದೆ. ಈ ದಿನ ಕೆಲಸ ಕಾರ್ಯಗಳು ನಿಮ್ಮ ಅನುಕೂಲಕ್ಕೆ ತಕ್ಕಂತೆ ಆಗಲಿದೆ. ದೂರದ ವ್ಯವಹಾರದಲ್ಲಿ ಹೆಚ್ಚಿನ ಅಭಿವೃದ್ಧಿ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.
ಮೀನ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ಅವಕಾಶಗಳು ಸಿಗಲಿವೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.