ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ದೈಹಿಕ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ಮಾನಸಿಕವಾಗಿ ಗಟ್ಟಿಯಾಗಲಿದ್ದೀರಿ. ಉದ್ಯೋಗ, ವ್ಯವಹಾರ ನಿಮಿತ್ತ ಪ್ರಯಾಣ ಮಾಡಬೇಕಾಗಿ ಬರಲಿದೆ. ದಾಂಪತ್ಯದಲ್ಲಿ ಪರಸ್ಪರ ಸಹಕಾರದಿಂದ ಅಭಿವೃದ್ಧಿ ಸಾಧ್ಯ.
ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣ ಗಳಿಕೆಗೆ ನಾನಾ ದಾರಿಗಳನ್ನು ಕಂಡುಕೊಳ‍್ಳಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.
ಮಿಥುನ: ವೃತ್ತಿರಂಗದಲ್ಲಿ ನಿಮಗೆ ಬರುವ ಎಲ್ಲಾ ಅಡೆತಡೆಗಳನ್ನು ದಾಟಲು ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾದೀತು.
ಕರ್ಕಟಕ: ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ಪರವೂರಿಗೆ ಸಂಚರಿಸಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.
ಸಿಂಹ: ಹಿರಿಯರ ಮನಸ್ಸನ್ನು ಅರಿತುಕೊಂಡು ಮಾತನಾಡಿ. ಕೌಟುಂಬಿಕವಾಗಿ ಅನಗತ್ಯ ಸಂಘರ್ಷಕ್ಕೆ ದಾರಿ ಮಾಡಿಕೊಡಬೇಡಿ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.
ಕನ್ಯಾ: ನಿಮ್ಮಿಂದ ಸಹಾಯ ಪಡೆದವರು ಫಲಾಪೇಕ್ಷೆ ಮಾಡಲಿದ್ದಾರೆ. ಮಕ್ಕಳದ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ತಾಳ್ಮೆಯಿರಲಿ.
ತುಲಾ: ಕಳೆದು ಹೋದ ವಸ್ತುಗಳ ಬಗ್ಗೆ ಚಿಂತಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹಿಂದೆ ಭೇಟಿಯಾದ ವಿಶೇಷ ವ್ಯಕ್ತಿಗಳನ್ನು ಮತ್ತೊಮ್ಮೆ ಭೇಟಿಯಾಗುವ ಅವಕಾಶ ಸಿಗಲಿದೆ. ಮಹಿಳೆಯರಿಗೆ ಸ್ಥಾನ ಮಾನದಲ್ಲಿ ಉನ್ನತಿಯ ಯೋಗವಿದೆ.
ವೃಶ್ಚಿಕ: ಕೈಗೊಳ್ಳುವ ಕೆಲಸಗಳಲ್ಲಿ ಯಶಸ್ಸು ಸಾಧಿಸಬೇಕಾದರೆ ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.
ಧನು: ನಿಮ್ಮಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಮಕ್ಕಳ ಬಗ್ಗೆ ಅನಗತ್ಯ ಚಿಂತೆ ಬೇಡ. ಮಾತಿನ ಮೇಲೆ ಕಡಿವಾಣ ಹಾಕುವುದು ಉತ್ತಮ. ಸಂಗಾತಿಯ ಕಿವಿ ಮಾತುಗಳನ್ನು ಪಾಲಿಸಬೇಕಾಗುತ್ತದೆ.
ಮಕರ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಾಹನ, ಭೂಮಿ ಖರೀದಿ ವ್ಯವಹಾರಗಳಲ್ಲಿ ಅಡಚಣೆಗಳು ಕಂಡುಬಂದೀತು. ತಾಳ್ಮೆಯಿರಲಿ.
ಕುಂಭ: ವ್ಯಾಪಾರೀ ವರ್ಗದವರಿಗೆ ನಿವ್ವಳ ಲಾಭವಾಗಲಿದ್ದು, ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಜೀವನದಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲು ಇದು ಸುದಿನ.
ಮೀನ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ, ಗೌರವ ಪ್ರಾಪ್ತಿಯಾಗಲಿದೆ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.