Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಶುಕ್ರವಾರ, 24 ಜೂನ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮನೆಯಲ್ಲಿ ಸಣ್ಣ ಪುಟ್ಟ ಮಾರ್ಪಾಡು ಕೆಲಸಗಳನ್ನು ಮಾಡಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದಷ್ಟೇ ಖರ್ಚೂ ಇರಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಶುಭ ವಾರ್ತೆಗಳು ಕೇಳಿಬಂದೀತು. ಚಿಂತೆ ಬೇಡ.

ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಮಾನಗಳು ವೃದ್ಧಿಯಾಗಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವಿದ್ಯಾರ್ಥಿಗಳು ಅಧ್ಯಯನ ನಿಮಿತ್ತ ಪ್ರಯಾಣ ಮಾಡಲಿದ್ದಾರೆ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯವಹಾರದಲ್ಲಿ ಹಿರಿಯರ ಮಾರ್ಗದರ್ಶನ ಉಪಯೋಗಕ್ಕೆ ಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಕರ್ಕಟಕ: ಮನಸ್ಸಿನಲ್ಲಿ ಬಯಸಿದ್ದು ಒಂದು, ಆಗುವುದು ಇನ್ನೊಂದು ಎಂಬ ಸ್ಥಿತಿಯಾದೀತು. ಸಂಗಾತಿಯ ಕೆಲವೊಂದು ಸಲಹೆಗಳನ್ನು ಪಾಲಿಸುವುದು ಉತ್ತಮ. ವೃತ್ತಿರಂಗದಲ್ಲಿ ವಿವೇಚನೆಯಿಂದ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ.

ಸಿಂಹ: ಶೈಕ್ಷಣಿಕ ರಂಗದಲ್ಲಿ ವೃತ್ತಿಯಲ್ಲಿರುವವರಿಗೆ ಮುನ್ನಡೆ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಗೃಹ ಸಂಬಂಧೀ ವಿಚಾರದಲ್ಲಿ ಸಂಗಾತಿಯೊಂದಿಗೆ ಘರ್ಷಣೆಯಾದೀತು. ತಾಳ್ಮೆಯಿರಲಿ.

ಕನ್ಯಾ: ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆಯಿಂದ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಮಿತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ತುಲಾ: ಆಪ್ತೇಷ್ಟರೊಂದಿಗೆ ಕಾಲ ಕಳೆಯುವ ನಿಮ್ಮ ಕನಸು ನನಸಾಗಲಿದೆ. ಇಷ್ಟಭೋಜನ ಮಾಡಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾದೀತು. ದಾಂಪತ್ಯದಲ್ಲಿ ಸಾಮರಸ್ಯವಿರಲಿದೆ. ಇಂದಿನ ದಿನ ನಿಮ್ಮ ಪಾಲಿಗೆ ಶುಭವಾಗಲಿದೆ.

ಧನು: ಉದ್ಯೋಗ, ವ್ಯವಹಾರದಲ್ಲಿ ಗಮನಾರ್ಹ ಬದಲಾವಣೆಗಳಾದೀತು. ಕಟ್ಟಡ ಕಾಮಗಾರಿ ಕೆಲಸಗಳನ್ನು ಅರ್ಧಕ್ಕೇ ಸ್ಥಗಿತಗೊಳಿಸಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಮನಸ್ಸಿನಲ್ಲಿರುವುದನ್ನು ಇನ್ನೊಬ್ಬರ ಮುಂದೆ ಹೇಳಿಕೊಳ್ಳುವ ಮೊದಲು ಯೋಚಿಸುವುದು ಉತ್ತಮ. ವ್ಯವಹಾರದಲ್ಲಿ ಗುರುಹಿರಿಯರ ಪ್ರೋತ್ಸಾಹ ಸಿಗಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ.

ಕುಂಭ: ವೈಯಕ್ತಿಕವಾಗಿ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳಿಗೆ ಸಂಗಾತಿಯಿಂದ ಪರಿಹಾರ ಸಿಗುವುದು. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಮೀನ: ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರುವುದು.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ