Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಶನಿವಾರ, 25 ಜೂನ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರಿಗಳ ಪ್ರೀತಿಗೆ ಪಾತ್ರರಾಗಲಿದ್ದೀರಿ. ಹಿರಿಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಸಿಗಲಿದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ಚಿಂತೆ ಬೇಡ.

ವೃಷಭ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸಾಮಾಜಿಕ ಕೆಲಸಗಳಲ್ಲಿ ಭಾಗಿಯಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮಿಥುನ: ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಆಪ್ತರೊಂದಿಗೆ ಸಂಘರ್ಷವಾಗದಂತೆ ಎಚ್ಚರಿಕೆ ವಹಿಸಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಕರ್ಕಟಕ: ನಿಮ್ಮಿಂದ ಹಿಂದೆ ಸಾಲ ಪಡೆದವರಿಂದ ಮರಳಿ ಪಡೆಯುವ ಚಿಂತೆ ಎದುರಾಗಲಿದೆ. ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುನ್ನಡೆ ಕಂಡುಬರಲಿದೆ. ಕಾರ್ಯನಿಮಿತ್ತ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಬೇರೆಯವರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಿ ವಿವಾದಕ್ಕೆ ದಾರಿ ಮಾಡಿಕೊಡಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಆದಾಯವಿದ್ದರೂ ಖರ್ಚೂ ಕಂಡುಬರಲಿದೆ.

ತುಲಾ: ಇನ್ನೊಬ್ಬರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡುವುದು ಉತ್ತಮ. ಕಾರ್ಯರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮೆಚ್ಚುಗೆ ಸಿಗಲಿದೆ. ಹಿರಿಯರಿಗೆ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಶ್ಚಿಕ: ಹಳೆಯ ಸಮಸ್ಯೆಗಳು ಮತ್ತೆ ಎದುರಾದೀತು. ನೂತನ ದಂಪತಿಗಳು ವಿಶೇಷವಾದ ಕ್ಷಣಗಳನ್ನು ಕಳೆಯಲಿದ್ದಾರೆ. ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ಸಂತೋಷದ ವಾತಾವರಣವಿರಲಿದೆ. ತಾಳ್ಮೆ, ಸಂಯಮವಿರಲಿ.

ಧನು: ವಸ್ತು ಸ್ಥಿತಿ ಅರಿತು ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಧನಗಳಿಕೆಗೆ ನಾನಾ ಮಾರ್ಗಗಳು ತೆರೆದುಕೊಳ್ಳಲಿವೆ. ಅವಕಾಶಗಳನ್ನು ಬಳಸಿಕೊಳ್ಳಿ.

ಮಕರ: ಹೊಸ ಉದ್ಯೋಗಕ್ಕೆ ಸೇರಿಕೊಂಡಿದ್ದವರಿಗೆ ಸವಾಲುಗಳು ಎದುರಾದೀತು. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಅವಕಾಶ ಎದುರಾಗಲಿದೆ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ಖುಷಿ ಸಿಗಲಿದೆ. ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಹಿರಿಯರಿಗೆ ತೀರ್ಥ ಕ್ಷೇತ್ರಗಳಿಗೆ ಸಂದರ್ಶನ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ವೈಯಕ್ತಿಕವಾಗಿ ನಿಮ್ಮಿಂದ ಈ ಹಿಂದೆ ಲಾಭ ಪಡೆದುಕೊಂಡವರಿಂದ ಪ್ರತ್ಯುಪಕಾರವಾಗಲಿದೆ. ವಿವೇಚನೆಯಿಂದ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ