Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಬೆಂಗಳೂರು , ಭಾನುವಾರ, 26 ಜೂನ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೌಟುಂಬಿಕವಾಗಿ ನಿಮ್ಮ ಬದ್ಧತೆಯನ್ನು ಯಾರೂ ಪ್ರಶ್ನೆ ಮಾಡಲಾಗದು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ತಾಳ್ಮೆಯಿರಲಿ.

ವೃಷಭ: ಸಾಮಾಜಿಕವಾಗಿ ಕೀರ್ತಿ ಸಂಪಾದಿಸುವ ಯೋಗ ನಿಮ್ಮದಾಗಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗ. ಯೋಗ್ಯ  ವಯಸ್ಕರಿಗೆ ಶೀಘ್ರ ಕಂಕಣ ಭಾಗ್ಯ ಕೂಡಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ವಿದ್ಯಾರ್ಥಿ ಮುಖಂಡರಿಗೆ, ಧಾರ್ಮಿಕ ಮುಖಂಡರಿಗೆ ವಿಘ್ನಗಳು ಎದುರಾದೀತು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ವಸ್ತ್ರೋದ್ಯಮಿಗಳಿಗೆ ಲಾಭದಾಯಕ ದಿನವಾಗಿರಲಿದೆ.

ಕರ್ಕಟಕ: ಮನೆಯಲ್ಲಿ ಸಣ್ಣ ಪುಟ್ಟ ಸಂಘರ್ಷಗಳು ಸಾಮಾನ್ಯ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿಕೊಂಡು ಹೋಗಬೇಕಾಗುತ್ತದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಸಿಂಹ: ಭೂಮಿ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಉದ್ಯಮಿಗಳಿಗೆ ಲಾಭವಾಗಲಿದೆ. ತುರ್ತು ಪ್ರಯಾಣ ಮಾಡುವ ಅನಿವಾರ್ಯತೆ ಎದುರಾಗಲಿದೆ.

ಕನ್ಯಾ: ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿಗಳು ಹೆಗಲಿಗೇರಲಿವೆ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭವಾದೀತು. ಪ್ರೀತಿಪಾತ್ರರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ.

ತುಲಾ: ಸಜ್ಜನರ ಸಂಗದಿಂದ ಮಾನಸಿಕವಾಗಿ ನೆಮ್ಮದಿ ಪಡೆಯಲಿದ್ದೀರಿ. ಇಷ್ಟಮಿತ್ರರೊಂದಿಗೆ ಕಿರುಪ್ರವಾಸ ಮಾಡುವ ಯೋಗ. ದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ವೃಶ್ಚಿಕ: ನೀವು ಬಹಳ ದಿನಗಳಿಂದ ಕಾಯುತ್ತಿದ್ದ ವ್ಯಕ್ತಿಯನ್ನು ಭೇಟಿಯಾಗಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ತಾಳ್ಮೆ ಅಗತ್ಯ.

ಧನು: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ನೀವೇ ನಾಯಕತ್ವ ವಹಿಸಿಕೊಳ್ಳಲಿದ್ಧೀರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಎಲ್ಲವೂ ನೀವೆಣಿಸಿದಂತೇ ನಡೆಯುತ್ತದೆ ಎಂಬ ಅತಿಯಾದ ಆತ್ಮವಿಶ್ವಾಸ ಮುಳುವಾಗಬಹುದು. ಹಿರಿಯರ ಮಾತಿಗೆ ಕಿವಿಗೊಡುವುದು ಉತ್ತಮ. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಕುಂಭ: ಪಾಲುದಾರಿಕಾ ವ್ಯವಹಾರಗಳಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ನೂತನ ಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತೋಷವಾಗಲಿದೆ. ವಿದೇಶ ಪ್ರಯಾಣಕ್ಕೆ ಚಿಂತಿಸಿದ್ದರೆ ಕಾಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮೀನ: ಮಹಿಳೆಯರಿಗೆ ಸೌಂದರ್ಯವರ್ಧಕಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತಿಸಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ತ್ರೀಯರಿಗೆ ನಂಬಿಸಿ ಮೋಸ ಮಾಡಿದರೆ ಎಂಥಾ ಶಾಪ ತಟ್ಟುತ್ತದೆ ಗೊತ್ತಾ?!