Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

webdunia
ಶನಿವಾರ, 2 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಚಿಂತಿತ ಕಾರ್ಯಗಳು ಯಥಾವತ್ತಾಗಿ ನಡೆಯಲಿದೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಂಡು ಮುನ್ನಡೆಯಬೇಕಾಗಲಿದೆ. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಷಭ: ಆರೋಗ್ಯ ವೃದ್ಧಿಯಾಗಲಿದ್ದು, ಸಾಮಾಜಿಕವಾಗಿ ನಿರೀಕ್ಷಿತ ಸ್ಥಾನ ಮಾನ ನಿಮ್ಮದಾಗಲಿದೆ. ವಿದ್ಯಾರ್ಥಿಗಳು ವಿಷಯಾನ್ವೇಷಣೆಗಾಗಿ ಪ್ರಯತ್ನ ನಡೆಸಲಿದ್ದಾರೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವ ಯೋಗ ಕೂಡಿಬರಲಿದೆ.

ಕರ್ಕಟಕ: ಬರಬೇಕಾಗಿದ್ದ ಬಾಕಿ ಹಣ ನಿಮ್ಮ ಕೈ ಸೇರಲಿದ್ದು, ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ ನಿಮ್ಮದಾಗುವುದು. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.

ಸಿಂಹ: ರಾಜಕೀಯ ರಂಗದಲ್ಲಿರುವವಿರಗೆ ಎದುರಾಳಿಗಳಿಂದ ತೀವ್ರ ಪೈಪೋಟಿ ಎದುರಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ದಿನ ಕಾಯುವುದು ಉತ್ತಮ. ನೀರಿನಿಂದ ಅಪಾಯವಾಗುವ ಸಾಧ್ಯತೆ. ಎಚ್ಚರ.

ಕನ್ಯಾ: ನಿರುದ್ಯೋಗಿಗಳಿಗೆ ಉತ್ತಮ ಅವಕಾಶಕ್ಕಾಗಿ ಸತತ ಪ್ರಯತ್ನ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ಸಂತೋಷದ ಕ್ಷಣಗಳನ್ನು ಕಳೆಯಲಿದ್ದೀರಿ. ಯಂತ್ರೋಪಕರಣಗಳಿಂದ ತೊಂದರೆಯಾದೀತು. ಎಚ್ಚರಿಕೆಯಿಂದಿರುವುದು ಅಗತ್ಯ.

ತುಲಾ: ಗೃಹಕೃತ್ಯಗಳಿಂದ ಸಂಗಾತಿಯ ಸಹಾಯ ಸಿಗಲಿದೆ. ಪಾಲುದಾರಿಕೆ ವ್ಯವಹಾರಗಳಿಂದ ಲಾಭ ಪಡೆಯಲಿದ್ದೀರಿ. ಧನಾರ್ಜನೆಗೆ ತೊಂದರೆಯಿರದಿದ್ದರೂ ಖರ್ಚಿಗೆ ಹಲವು ದಾರಿಗಳು ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ವೃಶ್ಚಿಕ: ನಿಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರತೆಗೆಯುವ ಸಮಯ. ಆಪ್ತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಬಂಧು ಬಳಗದವರ ಪ್ರೋತ್ಸಾಹ ಕಂಡುಬರಲಿದೆ.

ಧನು:  ದೂರದ ವ್ಯವಹಾರಗಳಿಂದ ಅಭಿವೃದ್ಧಿ ಕಂಡುಬರುವುದು. ನೆರೆಹೊರೆಯವರೊಂದಿಗೆ ಕ್ಷುಲ್ಲುಕ ವಿಚಾರಕ್ಕೆ ವಾಗ್ವಾದ ನಡೆದೀತು. ಮಾತಿನ ಮೇಲೆ ನಿಗಾ ಇರಲಿ. ಮಕ್ಕಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡುವಿರಿ.

ಮಕರ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ವೈಯಕ್ತಿಕ ಜೀವನದಲ್ಲಿ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಹೊಸದಾಗಿ ಆರಂಭಿಸಿದ್ದ ಉದ್ದಿಮೆಯಲ್ಲಿ ಯಶಸ್ಸು ಕಂಡುಬರಲಿದೆ. ಭೂಮಿ, ವಾಹನ ಖರೀದಿ ವಿಚಾರದಲ್ಲಿ ಮುನ್ನಡೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು.

ಮೀನ: ಅನಗತ್ಯ ವಿಚಾರಗಳಿಂದ ಮನಸ್ಸು ಹಾಳು ಮಾಡಿಕೊಳ್ಳಬೇಡಿ. ಉದ್ದೇಶಿತ ಕಾರ್ಯಗಳಿಗೆ ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಆಷಾಢ ಮಾಸದ ನಾಲ್ಕು ಶುಕ್ರವಾರ ಯಾವ ದೇವಿಯನ್ನು ಆರಾಧಿಸಿದರೆ ಯಾವ ಫಲ?