Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 4 ಜುಲೈ 2022 (08:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆರೋಗ್ಯ ಮತ್ತು ಸುಖಮಯ ಜೀವನಕ್ಕಾಗಿ ಮನಸ್ಸಿಗೆ ಶಾಂತಿ ಮುಖ್ಯ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಪಾಲಿಗೆ ಬಂದಿದ್ದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು.

ವೃಷಭ: ಸ್ವತಂತ್ರವಾಗಿ ವ್ಯಾಪಾರ, ಉದ್ದಿಮೆ ಆರಂಭಿಸುವ ಯೋಜನೆಗಳು ತಲೆಗೆ ಬರಲಿವೆ. ಗುರುಹಿರಿಯರ ಸಲಹೆ ಪಡೆಯಿರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾದೀತು. ತಾಳ್ಮೆಯಿರಲಿ.

ಮಿಥುನ: ಆರ್ಥಿಕವಾಗಿ ಧನಾಭಿವೃದ್ಧಿಯಾಗಲಿದ್ದು, ಹೊಸ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಜನೆಯಲ್ಲಿ ಆಸಕ್ತಿ ಕಂಡುಬರಲಿದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಚಿಂತೆ ಬೇಡ.

ಕರ್ಕಟಕ: ಆಪ್ತರೊಂದಿಗೆ ಸಂತೋಷದ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ. ಇಷ್ಟಭೋಜನ ಮಾಡಲಿದ್ದೀರಿ. ಮನೆಗೆ ಬೇಕಾದ ಅಗತ್ಯ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ವಾಹನ ಸಂಚಾರದಲ್ಲಿ ಜಾಗರೂಕತೆ ಅಗತ್ಯ.

ಸಿಂಹ: ವೃತ್ತಿರಂಗದಲ್ಲಿ ನಿಮಗೆ ಎದುರಾಳಿಗಾಗಿದ್ದವರಿಂದ ಮುಕ್ತಿ ಸಿಗಲಿದೆ. ಹೊಸ ಉದ್ಯೋಗಕ್ಕೆ ಪ್ರಯತ್ನ ನಡೆಸಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಕನ್ಯಾ: ನಿಮ್ಮ ವಿಚಾರಗಳಿಗೆ ಇತರರ ಮನ್ನಣೆ ಸಿಗದೇ ಮನಸ್ಸಿಗೆ ಕಸಿವಿಸಿಯಾದೀತು. ಲೆಕ್ಕಾಚಾರದಿಂದ ಖರ್ಚು ಮಾಡಬೇಕಾಗುತ್ತದೆ. ಮಕ್ಕಳಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ತುಲಾ: ಶಾರೀರಿಕವಾಗಿ ಆರೋಗ್ಯವಾಗಿದ್ದರೂ ಮಾನಸಿಕವಾಗಿ ಹಳೆಯ ವಿಚಾರಗಳು ಘಾಸಿಗೊಳಿಸೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಮಾತಿನ ಮೇಲೆ ನಿಗಾ ಇರಲಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ವೃಶ್ಚಿಕ: ನಿಮ್ಮ ಜೊತೆಗಿದ್ದವರ ಬಗ್ಗೆ ನೀವು ನೋಡುವ ದೃಷ್ಟಿಕೋನ ಬದಲಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಆರೋಗ್ಯದಲ್ಲಿ ಚೇತರಿಕೆಯಿರಲಿದೆ.

ಧನು:  ನಿಮ್ಮ ಜೊತೆಗಿದ್ದವರಿಂದಲೇ ನಿಮಗೆ ವಂಚನೆಯಾಗುವ ಭೀತಿ. ಅನಗತ್ಯ ಮಾತುಗಳಿಗೆ ಕಡಿವಾಣ ಹಾಕುವುದು ಉತ್ತಮ. ಸಂಗಾತಿಯೊಂದಿಗೆ ಸಣ್ಣ ಪುಟ್ಟ ಘರ್ಷಣೆಗಳಾದೀತು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಸಕ್ತಿ ಹೆಚ್ಚಲಿದೆ.

ಮಕರ: ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಕೌಟುಂಬಿಕವಾಗಿ ಸುಖ ಸಮೃದ್ಧಿಯಿರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ತಾಳ್ಮೆಯಿರಲಿ.

ಕುಂಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ತಿರುವು ಸಿಗಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಹಿರಿಯರ ಆರೋಗ್ಯ ಗಮನಿಸಿ.

ಮೀನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಮುಂದಾಗಲಿದ್ದೀರಿ. ಕೃಷಿಕರಿಗೆ ಬೆಳೆ ನಷ್ಟದ ಭೀತಿ. ದೂರದ ವ್ಯವಹಾರಗಳಿಂದ ಲಾಭವಾದೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments