Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 19 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಹಳ ದಿನಗಳ ನಂತರ ಪ್ರೀತಿ ಪಾತ್ರರ ಭೇಟಿ ಸಂತೋಷ ಕೊಡಲಿದೆ. ಇಷ್ಟಭೋಜನ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಣ್ಣ ಪುಟ್ಟ ಮನಸ್ತಾಪಗಳನ್ನು ಮರೆತು ಮುನ್ನಡೆಯುವುದು ಉತ್ತಮ.

ವೃಷಭ: ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಯಂತ್ರೋಪಕರಣಗಳ ವೃತ್ತಿಯವರಿಗೆ ಕೊಂಚ ಬಿಡುವು ಸಿಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಾಹನ ಖರೀದಿ ಯೋಗವಿದೆ.

ಕರ್ಕಟಕ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಸಿಂಹ: ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಪ್ರಯತ್ನಿಸಲಿದ್ದೀರಿ. ಕೆಲಸದ ನಿಮಿತ್ತ ದೀರ್ಘ ಪ್ರಯಾಣ ಮಾಡಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗಿಸಿಕೊಂಡವರಿಗೆ ಉನ್ನತಿಯ ಯೋಗ. ತಾಳ್ಮೆಯಿರಲಿ.

ಕನ್ಯಾ: ಗುರುಹಿರಿಯರ ಪ್ರೋತ್ಸಾಹದಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಇಷ್ಟಭೋಜನ ಮಾಡುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು. ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ನೆಮ್ಮದಿ ಕಂಡುಬರಲಿದೆ. ದೈನಂದಿನ ಕೆಲಸ ಕಾರ್ಯಗಳನ್ನು ನೆರವೇರಿಸಲು ಉದಾಸೀನ ಪ್ರವೃತ್ತಿ ಕಂಡುಬಂದೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಎಷ್ಟೋ ದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಆಸ್ತಿ ವಿಚಾರಗಳು ಹಿರಿಯರ ಮಧ್ಯಸ್ಥಿಕೆಯಲ್ಲಿ ಇತ್ಯರ್ಥವಾಗಲಿದೆ.

ಮಕರ: ಬಹುತೇಕ ಕೆಲಸ ಕಾರ್ಯಗಳನ್ನು ಮುಗಿಸಿದ್ದರೂ ಏನೋ ಒಂದು ರೀತಿಯ ಅತೃಪ್ತಿಯ ಭಾವ ಕಾಡೀತು. ಮನಸ್ಸಿನ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಅನಗತ್ಯ ಚಿಂತೆ ಬೇಡ.

ಕುಂಭ: ಕೈಗೊಂಡ ಕಾರ್ಯದಲ್ಲಿ ಯಶಸ್ಸು ಸಿಗಬೇಕಾದರೆ ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಹೊಸ ಜನರ ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ ಆಲಿಸಲಿದ್ದೀರಿ.

ಮೀನ: ನೀವು ಮಾಡಬೇಕೆಂದುಕೊಂಡಿದ್ದ ಕೆಲಸ ಕಾರ್ಯಗಳಿಗೆ ಅಡ್ಡಿ ಆತಂಕಗಳು ಎದುರಾದೀತು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದಾಂಪತ್ಯದಲ್ಲಿ ಮಧ‍್ಯಮ ಸುಖ. ಮಕ್ಕಳಿಂದ ಸಂತೋಷ ಸಿಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ