Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 20 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿಗಳಿಗೆ ಮತ್ತು ಉನ್ನತ ವ್ಯಾಸಂಗಕ್ಕೆ ಪ್ರಯತ್ನ ಪಡುತ್ತಿರುವವರಿಗೆ ಮುನ್ನಡೆ ಕಂಡುಬರಲಿದೆ. ಉದ್ಯೋಗ ವ್ಯವಹಾರದಲ್ಲಿ ಸಮಯಕ್ಕೆ ಸರಿಯಾಗಿ ಹಣಕಾಸಿನ ಸಹಾಯ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಪಾಲುದಾರಿಕೆ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ಕೈ ತುಂಬಾ ವರಮಾನ ಬರುವಂತಹ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ದಂಪತಿಗಳ ನಡುವೆ ಕ್ಷುಲ್ಲುಕ ಕಾರಣಕ್ಕೆ ಮನಸ್ತಾಪಗಳು ಬರುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ. ಆರ್ಥಿಕವಾಗಿ ಆದಾಯಕ್ಕೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಸಿಂಹ: ಸ್ವಯಂ ಉದ್ಯೋಗಿಗಳಿಗೆ ಅಭಿವೃದ್ಧಿ ಕಂಡುಬರಲಿದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.

ಕನ್ಯಾ: ಮನೆಯಲ್ಲಿ ಸಂತೋಷದ ವಾತಾವರಣವಿರಲಿದ್ದು, ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ  ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿವೆ.

ತುಲಾ: ಪಾಲುದಾರಿಕೆ ಕ್ಷೇತ್ರದಲ್ಲಿ ಹಣಕಾಸಿನ ಲಾಭವಾದರೂ ಹಿತಶತ್ರುಗಳಿಂದ ದೂರವಿದ್ದರೆ ಉತ್ತಮ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ಮಕ್ಕಳ ಯಶಸ್ಸು ಸಂತೋಷ ಕೊಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿಶೇಷ ವ್ಯಕ್ತಿಗಳ ಭೇಟಿಯಾಗುವ ಸಾಧ‍್ಯತೆಯಿದೆ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ.

ಧನು: ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಆದಾಯ ಗಳಿಕೆಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ.

ಕುಂಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಕಿರು ಓಡಾಟ ನಡೆಸಲಿದ್ದೀರಿ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ನೇರ ನುಡಿಯಿಂದ ಇತರರ ನಿಷ್ಠುರಕ್ಕೊಳಗಾಗದಿರಿ. ಆಸ್ತಿ ವಿಚಾರದಲ್ಲಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ