ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 22 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಸಿಗಲಿದೆ. ಯಾತ್ರೆ ಕೈಗೊಳ‍್ಳಲು ಯೋಚನೆ ಮಾಡಿದ್ದರೆ ಇದು ಸೂಕ್ತ ಸಮಯ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿ ಕಂಡುಬರಲಿದೆ.

ವೃಷಭ: ಉದ್ಯೋಗಾಂಕಾಕ್ಷಿಗಳು ಸತತ ಪ್ರಯತ್ನಕ್ಕೆ ತಕ್ಕ ಫಲ ಕಂಡುಕೊಳ್ಳಲಿದ್ದೀರಿ. ನಿಮ್ಮ ಮನೋಭಿಲಾಷೆಯಂತೆ ಕೆಲಸ ಕಾರ್ಯಗಳು ನೆರವೇರಲಿದೆ. ಗುರುಹಿರಿಯರ ಪ್ರೋತ್ಸಾಹ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ವಿಚಾರವಂತರ ಮಾತುಗಳಿಗೆ ಕಿವಿಗೊಡುವುದು ಉತ್ತಮ. ಮಧ್ಯಮ ವರ್ಗದವರಿಗೆ ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬಂದೀತು. ಮನಸ್ಸಿನ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಹಳೆಯ ಬಾಕಿ ವಸೂಲಾತಿ ತಲೆನೋವಾಗಿ ಕಾಡಲಿದೆ. ಆಪ್ತರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಣೆಗೆ ಪ್ರಯತ್ನ ನಡೆಸಲಿದ್ದೀರಿ.

ಸಿಂಹ: ಅಧ್ಯಯನ ನಿಮಿತ್ತ ಪ್ರಯಾಣ ಮಾಡಬೇಕಾಗಿ ಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ಧನಾದಾಯ ವೃದ್ಧಿಗೆ ಕ್ರಮ ಕೈಗೊಳ್ಳಲಿದ್ದೀರಿ. ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ.

ಕನ್ಯಾ: ನಿಮ್ಮ ಭವಿಷ್ಯದ ಬಗ್ಗೆ ಬೇರೆಯವರು ತೀರ್ಮಾನ ತೆಗೆದುಕೊಳ್ಳುವಂತಹ ಪರಿಸ್ಥಿತಿ ತಂದುಕೊಳ್ಳಬೇಡಿ. ವ್ಯಾಪಾರಿ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ತುಲಾ: ವಿದ್ಯಾರ್ಥಿಗಳಿಗೆ ಅಧ್ಯಯನ ಸಂಬಂಧವಾಗಿ ಗಣನೀಯ ಪ್ರಗತಿ ಕಂಡುಬರಲಿದೆ. ನಿಮ್ಮ ವಿಚಾರಧಾರೆಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದಿನದಂತ್ಯಕ್ಕೆ ಸಂತೋಷದ ವಾರ್ತೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಯಲಿದೆ. ಸನ್ಮಿತ್ರರ ಸಹವಾಸ ನಿಮಗೆ ಒಳಿತು ಮಾಡಲಿದೆ. ಮಕ್ಕಳಿಂದ ನಿಮ್ಮ ಸಂತೋಷ ಹೆಚ್ಚಾಗಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ.

ಧನು:  ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ. ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದವರಿಗೆ ಪ್ರಗತಿ. ಮಹಿಳೆಯರಿಗೆ ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ವಾಹನ, ಆಸ್ತಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಮಕರ: ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ. ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಮಕ್ಕಳಿಂದ ಸಂತೋಷ ಹೆಚ್ಚಾಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಾಗಲಿದೆ.

ಕುಂಭ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಸರಕಾರಿ ಉದ್ಯೋಗಿಗಳಿಗೆ ಕೊಂಚ ಬಿಡುವು ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ಕೆಲಸ ತೊಡಗಿಸಿಕೊಳ್ಳಬೇಕು.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗ. ದಾಂಪತ್ಯ ಜೀವನದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ. ಸಂತೋಷವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ