ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 27 ಜುಲೈ 2022 (07:33 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೂರದ ನೆಂಟರಿಷ್ಟರು ಹತ್ತಿರವಾಗುವ ಸಂದರ್ಭ. ತಾಳ್ಮೆಯಿಂದ ಕಾರ್ಯಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ. ನಿರೀಕ್ಷಿತ ಧನಾದಾಯ ಸಿಗಲಿದ್ದು, ಅನಗತ್ಯ ಚಿಂತೆ ಬೇಡ.

ಮಿಥುನ: ನಿಮ್ಮ ಉದಾರ ಮನೋಗುಣವನ್ನು ಕೆಲವರು ಸ್ವಂತ ಲಾಭಕ್ಕೆ ಬಳಸಿಕೊಳ್ಳಬಹುದು. ಎಚ್ಚರಿಕೆಯಿಂದಿರುವುದು ಮುಖ್ಯ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಅನಿರೀಕ್ಷಿತ ನೆಂಟರಿಷ್ಟರ ಭೇಟಿ ಯೋಗ.

ಕರ್ಕಟಕ: ಹೊಸದಾಗಿ ಏನಾದರೂ ಪ್ರಯೋಗಕ್ಕಿಳಿಯುವ ಮನಸ್ಸಾಗವುದು. ವಾಹನ ಸಂಚಾರ ಮಾಡುವಾಗ ಅಪಘಾತದ ಭಯ ಕಂಡುಬರಲಿದೆ. ಬೇರೆಯವರಿಗೆ ಸಹಾಯ ಮಾಡುವುದರಲ್ಲಿ ಸಂತೋಷ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಬೇರೆಯವರು ನಿಮ್ಮ ಏಳಿಗೆ ಕಂಡು ಅಸೂಯೆಪಡುವಂತಹ ಸ್ಥಿತಿ ಎದುರಾಗಲಿದೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿರಲಿ. ಇಷ್ಟಭೋಜನ ಮಾಡುವ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಹೊಸ ಉದ್ಯೋಗಕ್ಕೆ ಪ್ರಯತ್ನ ಪಡುತ್ತಿದ್ದರೆ ತಕ್ಕಮಟ್ಟಿನ ಯಶಸ್ಸು ಕಂಡುಬರಲಿದೆ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಚಿಂತೆ ಬೇಡ.

ತುಲಾ: ಮಹಿಳೆಯರಿಗೆ ಉನ್ನತಾಧಿಕಾರದ ಯೋಗ. ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ವ್ಯಾಪಾರಿಗಳು ಕ್ರಿಯಾತ್ಮಕ ಯೋಜನೆ ಹಾಕಿಕೊಳ್ಳಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ವೃಶ್ಚಿಕ: ಮನೋಭಿಲಾಷೆಗಳಿಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಶುಭ ದಿನವಾಗಲಿದೆ. ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಬಾಕಿ ಹಣ ಪಾವತಿಗೆ ದಾರಿಗಳು ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಪರರಿಗೆ ಸಹಾಯ ಮಾಡುವ ಮೊದಲು ಪೂರ್ವಾಪರ ತಿಳಿದುಕೊಳ್ಳಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ: ಸರಕಾರಿ ಉದ್ಯೋಗಿಗಳ ಪಾಲಿಗೆ ಬಿಡುವಿಲ್ಲದ ದಿನವಾಗಲಿದೆ. ಬೇರೆಯವರಿಗೆ ಸಹಾಯ ಮಾಡುವುದರಲ್ಲಿ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಕೌಟುಂಬಿಕವಾಗಿ ಸುಖ ಸಮೃದ್ಧಿಯಿರಲಿದೆ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ.

ಕುಂಭ: ಹಣಕಾಸಿನ ವ್ಯವಹಾರ ಮಾಡುವ ಮುನ್ನ ಎಚ್ಚರವಿರಲಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ಮೀನ: ಧನಾಗಮನ ವಿಚಾರದಲ್ಲಿ ನಿರಾಸಕ್ತಿ ಕಂಡುಬಂಧೀತು. ಆಪ್ತರೊಂದಿಗೆ ಸಮಯ ಕಳೆಯುವ ಮನಸ್ಸಾಗಲಿದೆ. ಸಹೋದದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಮುಂದಿನ ಸುದ್ದಿ
Show comments