ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಸುಗ್ರಾಸ ಭೋಜನ ಸವಿಯುವ ಅವಕಾಶ. ವ್ಯವಹಾರದಲ್ಲಿ ಏಳಿಗೆ ಕಂಡುಬರಲಿದೆ. ಆರ್ಥಿಕವಾಗಿ ಬರಬೇಕಾಗಿದ್ದ ಬಾಕಿ ಹಣ ವಸೂಲಾಗಲಿದೆ. ಸಾಂಸಾರಿಕವಾಗಿ ಮಾತಿನ ಮೇಲೆ ನಿಗಾ ಇಲ್ಲದೇ ಹೋದರೆ ಘರ್ಷಣೆಗಳಾದೀತು.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಪೈಪೋಟಿ ಕಂಡುಬಂದೀತು. ನಿಮಗೆ ಆಗಿಬರದ ವ್ಯಕ್ತಿಗಳಿಂದ ತೊಂದರೆಗಳು ಎದುರಾಗುವ ಸಂಭವ. ಸಂಗಾತಿಯೊಂದಿಗೆ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.
ಮಿಥುನ: ಕೈಲಾಗದವರಿಗೆ ಸಹಾಯ ಮಾಡಿದ ನೆಮ್ಮದಿ ನಿಮ್ಮದಾಗಲಿದೆ. ವಿಶೇಷ ವ್ಯಕ್ತಿಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದ್ದಾರೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಸಫಲತೆ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.
ಕರ್ಕಟಕ: ನೀವು ಇಂದು ಕೈಗೊಳ್ಳುವ ತೀರ್ಮಾನದ ಮೇಲೆ ಭವಿಷ್ಯ ನಿಂತಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸಲಿದ್ದೀರಿ.
ಸಿಂಹ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಬಗ್ಗೆ ದೂರು, ಅಪವಾದಗಳು ಕೇಳಿಬಂದೀತು. ಎಚ್ಚರಿಕೆಯಿಂದ ನಿಭಾಯಿಸಬೇಕು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.
ಕನ್ಯಾ: ನಿಮ್ಮ ವೈಯಕ್ತಿಕ ನಷ್ಟಕ್ಕೆ ಇನ್ನೊಬ್ಬರನ್ನು ಹೊಣೆ ಮಾಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಕಿರು ಸಂಚಾರ ಮಾಡಲಿದ್ದೀರಿ.
ತುಲಾ: ನೀವು ಬಹುವಾಗಿ ಪ್ರೀತಿಸಿದ್ದ ವಸ್ತು ಕೈ ಜಾರಿ ಹೋಗುವ ಪರಿಸ್ಥಿತಿ ನಿಮ್ಮದಾಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರ್ಥಿಕವಾಗಿ ಸುಧಾರಣೆ ಕಂಡುಬಂದರೂ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು.
ವೃಶ್ಚಿಕ: ವಯಸ್ಸಿಗೆ ತಕ್ಕಂತೆ ನಿಮ್ಮ ಆಚರಣೆಗಳನ್ನೂ ಬದಲಾಯಿಸಿಕೊಳ್ಳಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಧನು: ಸಂಗಾತಿಯೊಂದಿಗೆ ಮಧುರ ಕ್ಷಣ ಕಳೆಯುವ ಯೋಗ. ದೇಹಾರೋಗ್ಯದ ವಿಚಾರದಲ್ಲಿ ಉಪೇಕ್ಷೆ ಬೇಡ. ಬಂಧು ಮಿತ್ರರನ್ನು ಭೇಟಿ ಮಾಡುವ ಅವಕಾಶ ಸಿಗಲಿದೆ. ಮನಸ್ಸಿಗೆ ಉಲ್ಲಾಸ ಕೊಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.
ಮಕರ: ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ಸರ್ಕಾರಿ ನೌಕರರಿಗೆ ಕೊಂಚ ಬಿಡುವಿನ ಸಮಯ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಿಗೆ ಮೆಚ್ಚುಗೆ ಸಿಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿರಲಿ.
ಕುಂಭ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೆ ಅತಿಯಾಗಿ ತಲೆಕೆಡಿಸಿಕೊಳ್ಳುವುದು ಬೇಡ. ಹಿರಿಯರಿಗೆ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ. ಖರ್ಚು ವೆಚ್ಚಗಳಾದೀತು.
ಮೀನ: ಕಷ್ಟದ ಸಮಯದಲ್ಲಿ ಸನ್ಮಿತ್ರರ ಸಹಾಯ ಒದಗಿಬರಲಿದೆ. ಹಿರಿಯರಿಗೆ ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ದೇವತಾ ಪ್ರಾರ್ಥನೆ ಮಾಡಿ.