ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 8 ಆಗಸ್ಟ್ 2022 (07:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನೀವು ಉದ್ದೇಶಿಸಿದ ಕೆಲಸಕ್ಕೆ ಎಷ್ಟೇ ಪ್ರತಿರೋಧವಿದ್ದರೂ ಸ್ವ ಪ್ರಯತ್ನ ಮುಂದುವರಿಸಲಿದ್ದೀರಿ. ಆರ್ಥಿಕವಾಗಿ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಎಷ್ಟೇ ಅಡೆತಡೆಗಳಿದ್ದರೂ ಕೆಲಸ ಕಾರ್ಯಗಳಲ್ಲಿ ಅಂತಿಮ ಜಯ ನಿಮ್ಮದಾಗಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ವೃತ್ತಿರಂಗದಲ್ಲಿ ಕಷ್ಟದ ಸಮಯದಲ್ಲಿ ಸಹೋದ್ಯೋಗಿಗಳಿಂದ ನೆರವು ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ನೆರೆಮನೆಯವರೊಂದಿಗೆ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ಸರಿ ಹೋಗಲಿವೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರು ಪೇರಾದೀತು. ಆತಂಕ ಬೇಡ. ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು.

ಸಿಂಹ: ದೇಹಾರೋಗ್ಯದ ವಿಚಾರದಲ್ಲಿ ಅಸಡ್ಡೆ ಸಲ್ಲದು. ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯಗಳು ತಪ್ಪಿ ಹೋಗಲಿವೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಉಂಟಾದೀತು. ತಾಳ್ಮೆಯಿರಲಿ.

ಕನ್ಯಾ: ಕಷ್ಟದ ಕಾಲದಲ್ಲಿ ಇನ್ನೊಬ್ಬರಿಗೆ ನೆರವಾದ ಸಂತೋಷ, ನೆಮ್ಮದಿ ಸಿಗಲಿದೆ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಮುನ್ನಡೆಯ ಯೋಗ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಬಹಳ ದಿನಗಳ ನಂತರ ಬಂಧು ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹೊಸ ಕೆಲಸಗಳಿಗೆ ಸೇರಿಕೊಂಡಿದ್ದವರಿಗೆ ಸವಾಲುಗಳು ಎದುರಾದೀತು. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ ನಿಮ್ಮದಾಗುವುದು.

ವೃಶ್ಚಿಕ: ಕಾರ್ಯರಂಗದಲ್ಲಿ ಇದು ಬಹಳ ಚುರುಕಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉದಾಸೀನ ಪ್ರವೃತ್ತಿ ಸಲ್ಲದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೊಗ ಸಿಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಧನು: ಸಂಗಾತಿಯ ಅಭಿಪ್ರಾಯಗಳಿಗೆ ಕಿವಿಗೊಡುವುದು ಉತ್ತಮ. ಅನಗತ್ಯ ವಿಚಾರಗಳಿಗೆ ಮನಸ್ತಾಪ ಮಾಡಿಕೊಳ್ಳುವ ಪ್ರಸಂಗ ಎದುರಾದೀತು. ಪರರ ವಸ್ತುವಿನ ಮೇಲೆ ವ್ಯಾಮೋಹ ಬೇಡ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಇದುವರೆಗೆ ಇದ್ದ ಅಡಚಣೆಗಳು ದೂರವಾಗಲಿದೆ. ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಅಭಿವೃದ್ಧಿ ನಿರೀಕ್ಷಿಸಬಹುದು. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಕೌಟುಂಬಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಇಷ್ಟ ಭೋಜನ ಮಾಡುವ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಅತಿಯಾದ ಯೋಚನೆಗಳಿಂದ ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿವೆ. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಮುಂದಿನ ಸುದ್ದಿ
Show comments