Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 9 ಆಗಸ್ಟ್ 2022 (06:41 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಗೃಹೋಪಕರಣಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮಾತೃ ಸಮಾನರಿಂದ ಸುಖ, ಶಾಂತಿ ದೊರೆಯುವುದು. ದಾಂಪತ್ಯ ಜೀವನದಲ್ಲಿ ಘರ್ಷಣೆಗಳ ಸಾಧ್ಯತೆ. ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿದರೆ ನೆಮ್ಮದಿ ದೊರೆಯಲಿದೆ.

ವೃಷಭ: ಕೆಲಸ ಕಾರ್ಯಗಳಲ್ಲಿ ಬದಲಾವಣೆಗೆ ಹೊಂದಿಕೊಳ್ಳಬೇಕಾಗುತ್ತದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಮಿಥುನ: ವೃತ್ತಿರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷವಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರಿಗೆ ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ನಿಮಗೆ ಅಡೆತಡೆಯಾಗಿದ್ದವರಿಂದ ಪಾರಾಗಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಮಾನಸಿಕವಾಗಿ ಗೊಂದಲಗಳು ಕಾಡೀತು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಆಹಾರ ಸೇವನೆ ವಿಚಾರದಲ್ಲಿ ಅಜಾಗರೂಕತೆಯಿಂದ ಆರೋಗ್ಯದಲ್ಲಿ ವ್ಯತ್ಯಯವಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವುದು ಸಿಗುವುದು.

ಕನ್ಯಾ: ಸಕಾಲಕ್ಕೆ ಧನಾಗಮನವಾಗುವುದರಿಂದ ಸಂಭಾವ್ಯ ಅಪಾಯದಿಂದ ಪಾರಾಗಲಿದ್ದೀರಿ. ಕಾರ್ಯ ಸಾಧನೆಗೆ ಗಣ್ಯ ವ್ಯಕ್ತಿಗಳ ಭೇಟಿಯಾಗಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ತಾಳ್ಮೆಯಿರಲಿ.

ತುಲಾ: ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ತಕ್ಕ ಪ್ರತಿಫಲ ಸಿಗಲಿದೆ. ಸ್ವಯಂ ವ್ಯಾಪಾರಿಗಳಿಗೆ ಅನಿರೀಕ್ಷಿತ ಧನಾಗಮನವಾಗಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಇತರರ ಕೆಲಸಗಳಿಗೆ ಸಹಾಯ ಮಾಡುವುದರಿಂದ ನೆಮ್ಮದಿ ಕಂಡುಕೊಳ್ಳಲಿದ್ಧೀರಿ. ಭೂಮಿ, ವಾಹನ ಖರೀದಿ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಉದ್ಯೋಗ  ವಿಚಾರದಲ್ಲಿ ಹೊಸ ಸವಾಲಿಗೆ ಕೈ ಹಾಕಲಿದ್ದೀರಿ.

ಧನು: ಉನ್ನತ ಸ್ಥಾನ ಮಾನದ ನಿಮ್ಮ ಪ್ರಯತ್ನಕ್ಕೆ ಫಲ ಸಿಗದೇ ನಿರಾಸೆಯಾದೀತು. ಸಂಗಾತಿಯ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಾತಿನಲ್ಲಿ ಸಹನೆಯಿರಲಿ. ದೇವತಾ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಮಕರ: ಆತುರದ ಬುದ್ಧಿಗೆ ಕೈಕೊಟ್ಟು ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಆದಾಯ ಹೆಚ್ಚಳವಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮುಂದಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಸಕಾಲದಲ್ಲಿ ಆರ್ಥಿಕ ನೆರವು ಸಿಗಲಿದ್ದು, ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.  ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ.

ಮೀನ: ಬಹಳ ದಿನಗಳ ನಂತರ ಆಪ್ತ ಮಿತ್ರರನ್ನು ಭೇಟಿಯಾಗುವ ಯೋಗ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಮಾನ ವೃದ್ಧಿಯಾಗಲಿದೆ. ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿ

ಅಖಿಲಾಂಡೇಶ್ವರಿ ಸ್ತೋತ್ರಂ ಓದುವುದರ ಫಲವೇನು

ಕೃಷ್ಣ ಜನ್ಮಾಷ್ಠಮಿ ದಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ಗುರುವಾರದಂದು ಗುರು ರಾಘವೇಂದ್ರ ಅಷ್ಟಕಂ ತಪ್ಪದೇ ಓದಿ

ಸಾಲದ ಸುಳಿಯಲ್ಲಿದ್ದರೆ ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments