ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಅಧ್ಯಯನ ನಿರತರಿಗೆ ಅನುಕೂಲಕರ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಬಂಧು ಮಿತ್ರರೊಂದಿಗೆ ಕಾಲ ಕಳೆಯುವ ಅವಕಾಶ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಷಭ: ಅತಿಯಾಗಿ ವಿನಯ ತೋರುವವರೊಂದಿಗೆ ಎಚ್ಚರಿಕೆಯಿಂದಿರಿ. ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ನಿಮ್ಮ ಕೆಲಸಗಳಿಗೆ ಮನೆಯವರ ಸಾಥ್ ಸಿಗಲಿದೆ. ಅನಗತ್ಯ ಚಿಂತೆ ಬೇಡ.
ಮಿಥುನ: ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗಬೇಕಾದರೆ ಅತಿಯಾದ ಪರಿಶ್ರಮ ಅಗತ್ಯ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಮಾನ ಸುಧಾರಣೆಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.
ಕರ್ಕಟಕ: ಇದ್ದದ್ದನ್ನು ಇದ್ದ ಹಾಗೆ ಹೇಳಿ ಇತರರ ನಿಷ್ಠುರಕ್ಕೆ ಕಾರಣವಾಗಲಿದ್ದೀರಿ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಸಾಧಿಸಿದ ನೆಮ್ಮದಿ ನಿಮ್ಮದಾಗುವುದು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇವತಾ ಪ್ರಾರ್ಥನೆ ಮಾಡಿ.
ಸಿಂಹ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲಕರ ವಾತಾವರಣ ಸಿಗಲಿದೆ. ಚಿಂತೆ ಬೇಡ.
ಕನ್ಯಾ: ಆಪ್ತೇಷ್ಟರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಮಕ್ಕಳ ವಿಚಾರದಲ್ಲಿ ಅನಗತ್ಯ ತೊಂದರೆ ಮೈಮೇಲೆಳೆದುಕೊಳ್ಳಬೇಡಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ತಾಳ್ಮೆಯಿರಲಿ.
ತುಲಾ: ಉದ್ಯೋಗ ಕ್ಷೇತ್ರದಲ್ಲಿ ಇಷ್ಟು ದಿನ ನೀವು ಕಾಯುತ್ತಿದ್ದ ಫಲ ನಿಮಗೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.
ವೃಶ್ಚಿಕ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ ನಿಮ್ಮದಾಗಲಿದೆ. ಸ್ವಯಂ ವ್ಯಾಪಾರಿಗಳಿಗೆ ಉನ್ನತಿಯ ಯೋಗ. ಚಿಂತೆ ಬೇಡ.
ಧನು: ಮಕ್ಕಳ ಜೀವನದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ಸಂಗಾತಿಯೊಂದಿಗೆ ಘರ್ಷಣೆಗಳಾಗದಂತೆ ಎಚ್ಚರಿಕೆ ವಹಿಸಿ. ವ್ಯಾವಹಾರಿಕವಾಗಿ ಉತ್ತಮ ಫಲಗಳು ದೊರೆಯಲಿವೆ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ.
ಮಕರ: ವೃತ್ತಿರಂಗದಲ್ಲಿ ನಿಮಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪ್ರೀತಿ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ದೇವರ ಪ್ರಾರ್ಥನೆ ಮಾಡಿ.
ಕುಂಭ: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ಖುಷಿ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗುವುದು.
ಮೀನ: ಸರಿಯಾದ ಸಂದರ್ಭದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಯಿಂದ ದೂರವಾಗಲಿದ್ದೀರಿ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ದಾನ ಧರ್ಮಾದಿಗಳಿಂದ ನೆಮ್ಮದಿ ದೊರೆಯುವುದು.