ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 18 ಆಗಸ್ಟ್ 2022 (07:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಪಲ್ಲಟವಾಗುವ ಸಾಧ‍್ಯತೆ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೊರಬೇಕಾಗುತ್ತದೆ. ಹಣಕಾಸಿನ ಸುಧಾರಣೆಗೆ ನಿಮ್ಮ ಕೈಲಾದ ಪ್ರಯತ್ನ ಮಾಡಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಎದುರಾಳಿಗಳಿಂದ ತೊಂದರೆಗಳು ಎದುರಾದೀತು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಆಸ್ತಿ ಖರೀದಿ ವಿಚಾರದಲ್ಲಿ ಹಿರಿಯರ ಸಲಹೆ ಪಡೆದು ಮುಂದುವರಿಯಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಗಳಿಸುವ ಯೋಗ. ಪ್ರೀತಿ ಪಾತ್ರರಿಂದ ಅಚ್ಚರಿಯ ವಾರ್ತೆ ಕೇಳಿಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು.

ಕರ್ಕಟಕ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಒಳಗಾಗುವ ಪರಿಸ್ಥಿತಿ ಎದುರಾಗಲಿದೆ. ಯಂತ್ರೋಪಕರಣಗಳ ಜೊತೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವ್ಯಾಪಾರಿಗಳಿಗೆ ಮುನ್ನಡೆಯಿರಲಿದೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಅಭಿವೃದ್ಧಿ ಕಂಡುಬರಲಿದೆ. ಆದಾಯ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕನ್ಯಾ: ಹೊಸ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಸಹೋದ್ಯೋಗಿಗಳ ಅಸಹಕಾರ ಕಿರಿ ಕಿರಿ ತಂದೀತು. ಸಂಗಾತಿಗೆ ಅಚ್ಚರಿಯ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ತುಲಾ: ಕಾರ್ಯಕ್ಷೇತ್ರದಲ್ಲಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದ್ದು, ಯಶಸ್ಸು ಪಡೆಯಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನದ ದಿಕ್ಕು ಬದಲಾಗಲಿದೆ. ಮಹಿಳೆಯರಿಗೆ ಚಿನ್ನಾಭರಣಗಳನ್ನು ರಕ್ಷಿಸುವ ಹೊಣೆಗಾರಿಕೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ವೈಯಕ್ತಿಕ ಗುಟ್ಟುಗಳು ರಟ್ಟಾಗದಂತೆ ಎಚ್ಚರಿಕೆ ವಹಿಸಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.

ಮಕರ: ಪಾಲು ಬಂಡವಾಳ ವ್ಯವಹಾರದಿಂದ ಹೆಚ್ಚಿನ ಲಾಭ ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳ ಕಲಿಕೆಗೆ ಅವಕಾಶ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳು ಇತರರ ಗಮನ ಸೆಳೆಯಲಿವೆ. ನೆಮ್ಮದಿ ಕಂಡುಬರುವುದು.

ಕುಂಭ: ಅನಿವಾರ್ಯ ಕೆಲಸದ ನಿಮಿತ್ತ ಅನ್ಯವೂರಿಗೆ ಪ್ರಯಾಣ ಮಾಡುವ ಸಂದರ್ಭ ಎದುರಾದೀತು. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡದಂತೆ ಎಚ್ಚರಿಕೆ ವಹಿಸಿ.

ಮೀನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕೌಟುಂಬಿಕವಾಗಿ ಅನಿರೀಕ್ಷಿತ ನೆಂಟರಿಷ್ಟರ ಆಗಮನದಿಂದ ಸಂತೋಷವಿರಲಿದೆ. ಪೂರ್ವಾಪರ ಯೋಚಿಸದೇ ನಿರ್ಧಾರ ಕೈಗೊಳ್ಳಲು ಹೋಗಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments