Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 19 ಆಗಸ್ಟ್ 2022 (07:26 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ವ್ಯವಹಾರದಲ್ಲಿ ಮೂಗು ತೂರಿಸುವವರಿಂದ ಕಿರಿ ಕಿರಿ ಆಗಲಿದೆ. ಯಾಂತ್ರಿಕವಾಗಿ ಕೆಲಸ ಮಾಡುತ್ತಿದ್ದರೂ ಮಾನಸಿಕವಾಗಿ ಬಳಲಿದ್ದೀರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಬೇರೆಯವರಿಂದ ನಿಮ್ಮ ಅಮೂಲ್ಯ ವಸ್ತುವಿಗೆ ಹಾನಿಯಾಗುವ ಸಂಭವ. ಮಾತಿನ ಮೇಲೆ ನಿಗಾ ಇರಲಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಕಾರ್ಯಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸ ಕಂಡುಬರಲಿದೆ.

ಮಿಥುನ: ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸದಾಗಿ ಉದ್ಯೋಗ ಸೇರಿಕೊಂಡಿದ್ದರೆ ಸವಾಲುಗಳು ಸಹಜ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕರ್ಕಟಕ: ಯಾವುದೇ ಕೆಲಸಕ್ಕೆ ಕೈ ಹಾಕುವ ಮುನ್ನ ಕುಟುಂಬ ಸದಸ್ಯರೊಂದಿಗೆ ಪರಾಮರ್ಶಿಸಿ ಮುಂದುವರಿಯುವುದು ಉತ್ತಮ. ಕೈಲಾದ ಸಹಾಯ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ. ಆದರೆ ಉದರ ಸಂಬಂಧೀ ಆರೋಗ್ಯದ ಕಡೆಗೆ ಗಮನವಿರಲಿ. ಮಹಿಳೆಯರಿಗೆ ಸ್ಥಾನ ಮಾನ ವೃದ್ಧಿಯಾಗಲಿದೆ. ಚಿಂತೆ ಬೇಡ.

ಕನ್ಯಾ: ಎಷ್ಟೇ ಕಷ್ಟ ಬಂದರೂ ಸಮಚಿತ್ತದಿಂದ ಯೋಚಿಸಿ ಪರಿಹಾರ ಕಂಡುಕೊಳ್ಳಬೇಕಿದೆ. ಗುರುಹಿರಿಯರ ಬೆಂಬಲ ಸಿಗುವುದು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ತುಲಾ: ಉದ್ಯೋಗ ಸಂಬಂಧವಾದ ಸಮಸ್ಯೆಗಳಿಗೆ ಆಪ್ತರಿಂದ ಪರಿಹಾರ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ನಿಮ್ಮ ನಿರ್ಧಾರಗಳು ಇತರರ ಅಸಮಾಧಾನಕ್ಕೆ ಗುರಿಯಾದೀತು. ಕೆಲಸ ಕಾರ್ಯಗಳ ವಿಚಾರವಾಗಿ ಓಡಾಟ ನಡೆಸಬೇಕಾಗುತ್ತದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ತಾಳ್ಮೆಯಿರಲಿ.

ಧನು: ಅರ್ಧಕ್ಕೇ ನಿಂತ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ದಾಯಾದಿ ಕಲಹಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಅನಗತ್ಯ ಚಿಂತೆ ಬೇಡ.

ಮಕರ: ವ್ಯಾಪಾರ, ಉದ್ದಿಮೆಗಳಿಗೆ ಬಂಡವಾಳ ಹೂಡಲು ಇದು ಸಕಾಲ. ಆರ್ಥಿಕವಾಗಿ ಸುಧಾರಣೆ ಕಂಡುಬರಲಿದೆ. ಗುರುಹಿರಿಯರ ನಿಷ್ಠುರ ಕಟ್ಟಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಕುಂಭ: ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕಾಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆಯಿದ್ದರೂ ನಿರೀಕ್ಷಿಸಿದಷ್ಟು ಹಣ ಸಂಪಾದನೆಯಾಗಲಿಲ್ಲ ಎಂಬ ಬೇಸರ ಕಾಡಲಿದೆ. ತಾಳ್ಮೆಯಿರಲಿ.

ಮೀನ: ನೀವು ಬಯಸಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾಗಲಿದೆ. ಆಪ್ತರ ಕಷ್ಟಗಳಿಗೆ ಹೆಗಲು ಕೊಡಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ದೊರೆಯಲಿದೆ. ವಾಹನ ಖರೀದಿ ಯೋಗವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕೃಷ್ಣ ಬೆಣ್ಣೆ ಕದ್ದು ತಿನ್ನುತ್ತಿದ್ದುದು ಏಕೆ?