Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 21 ಆಗಸ್ಟ್ 2022 (06:19 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲಸದ ವಿಚಾರದಲ್ಲಿ ಕೊಂಚವೂ ರಾಜಿಯಿಲ್ಲದ ನಿಮ್ಮ ಗುಣ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ‍್ಳುವರೋ ಎಂಬ ಕೀಳರಿಮೆ ಬೇಡ. ಈ ಕ್ಷಣದ ಸಂತೋಷವನ್ನು ಅನುಭವಿಸಿ.

ವೃಷಭ: ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರಲಿದೆ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿವೆ.

ಮಿಥುನ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ ನಿಮ್ಮದಾಗುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ನಿಮ್ಮ ಹಳೆಯ ಮಿತ್ರರನ್ನು ಮತ್ತೆ ಭೇಟಿಯಾಗುವ ಯೋಗ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಹಿಳೆಯಿರಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ತಪ್ಪು ತಿಳಿದುಕೊಳ‍್ಳುವ ಸಂಭವ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿಶೇಷವಾದ ಭೋಜನ ಸವಿಯುವ ಯೋಗ. ನೆಂಟರಿಷ್ಟರ ಆಗಮನ ಸಾಧ‍್ಯತೆ.

ಕನ್ಯಾ: ಕೌಟುಂಬಿಕವಾಗಿ ಸಂತೋಷದಾಯಕವಾಗಿ ಕಾಲ ಕಳೆಯುವ ಯೋಗ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಯೋಗ.

ತುಲಾ: ವಿದ್ಯಾರ್ಥಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಉತ್ತಮ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಅವಿವಾಹಿತರಿಗೆ ವಿವಾಹಾದಿ ಸಂಬಂಧಗಳು ಕೂಡಿಬರಲಿವೆ.

ವೃಶ್ಚಿಕ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಧನು: ನಿಮ್ಮ ಮಾತುಗಳು ಇತರರಿಗೆ ಅಪಾರ್ಥಕ್ಕೆ ಎಡೆಮಾಡಿ ಕೊಟ್ಟೀತು. ಮಕ್ಕಳ ಜೀವನದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ.

ಮಕರ: ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾದೀತು. ಕಾರ್ಯರಂಗದಲ್ಲಿ ನಿಮ್ಮ ಕ್ರಿಯಾತ್ಮಕತೆಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಹಿತ ಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು.

ಕುಂಭ: ಭವಿಷ್ಯದ ಕನಸಿಗೆ ಬುನಾದಿ ಹಾಕಲಿದ್ಧೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಪ್ರೀತಿ ಪಾತ್ರರಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮನಸ್ಸಿನ ಮಾತು ಕೇಳಿ ನಿರ್ಧಾರ ಮಾಡುವುದು ಉತ್ತಮ. ಪ್ರೀತಿ ಪಾತ್ರರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments