Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 22 ಆಗಸ್ಟ್ 2022 (07:34 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳ ಫಲ ಅನುಭವಿಸಲಿದ್ದೀರಿ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ತಾಂತ್ರಿಕ ವೃತ್ತಿಯಲ್ಲಿರುವವರಿಗೆ ಮುನ್ನಡೆ. ವಿದ್ಯಾರ್ಥಿಗಳು ಶಿಕ್ಷಕರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ.

ವೃಷಭ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾದೀತು. ಮಾತಿನ ಮೇಲೆ ನಿಗಾ ಇರಲಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಕಂಡುಬರುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಕಾರ್ಯರಂಗದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಪರಿಶ್ರಮ ಪಡಬೇಕಾಗುತ್ತದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಉನ್ನತಿಯ ಯೋಗ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿಮ್ಮದಲ್ಲದ ವಸ್ತುವಿನ ಬಗ್ಗೆ ಮೋಹ ಬೇಡ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಅಗತ್ಯ.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ‍್ನಗಳು ತೋರಿಬಂದೀತು. ಇಷ್ಟಮಿತ್ರರ ಭೇಟಿ ಯೋಗವಿದೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ವಾಹನ ಖರೀದಿ ಯೋಗ ಸದ್ಯದಲ್ಲೇ ನನಸಾಗುವುದು.

ಕನ್ಯಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಾಥ‍್ ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ತಾಳ್ಮೆ ಅಗತ್ಯ.

ತುಲಾ: ನಿಮ್ಮ ಕರ್ತವ್ಯ ನಿಷ್ಠೆಯಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಕಾರ್ಯರಂಗದಲ್ಲಿ ನಿಮ್ಮ ಏಳಿಗೆ ಇತರರ ಗಮನ ಸೆಳೆಯಲಿದೆ. ಮಹಿಳೆಯರಿಗೆ ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಎಚ್ಚರಿಕೆ ಅಗತ್ಯ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಕಾಲ ಕಳೆಯುವ ಯೋಗ ಕೂಡಿಬರಲಿದೆ. ಗುರು ಹಿರಿಯರ ಪ್ರೋತ್ಸಾಹ ಕಂಡುಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಧನು: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಆದಾಯ ವೃದ್ಧಿಗೆ ನಾನಾ ಮಾರ್ಗಗಳು ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರತಿಸ್ಪರ್ಧಿಗಳನ್ನೂ ಮೀರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಂಡುಬರಲಿದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಎಷ್ಟೇ ಕಷ್ಟಗಳಿದ್ದರೂ ಕಾರ್ಯಸಾಧನೆಯಾದ ಸಂತೋಷ ಸಿಗುವುದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಇರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಮೀನ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ವಿಚಾರದಲ್ಲಿ ಅಡೆತಡೆಗಳು ಕಂಡುಬಂದೀತು. ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ