Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 24 ಆಗಸ್ಟ್ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಸಮಯ ಕಳೆಯುವ ಅವಕಾಶ ಸಿಗುವುದು. ಕಾರ್ಯನಿಮಿತ್ತ ಓಡಾಟ ನಡೆಸಬೇಕಾದೀತು.

ವೃಷಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಸ್ವ ಸಾಮರ್ಥ್ಯದಿಂದ ಧನಾರ್ಜನೆಯಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಮಿಥುನ: ಮಾನಸಿಕವಾಗಿ ಕಾಡುತ್ತಿದ್ದ ಗೊಂದಲಗಳಿಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ವಿಶೇಷವಾದ ವ್ಯಕ್ತಿಗಳಿಂದ ನಿಮಗೆ ಸಹಾಯವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ನಿಮ್ಮದಾಗಲಿದೆ.

ಕರ್ಕಟಕ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನ ಸಿಗಲಿದೆ. ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಬೇರೆಯವರು ನಿಮ್ಮನ್ನು ಹಗುರವಾಗಿ ಕಾಣಲು ಅವಕಾಶ ಕೊಡಬೇಡಿ. ತಾಳ್ಮೆಯಿರಲಿ.

ಸಿಂಹ: ನಿಮ್ಮಲ್ಲಿರುವ ಹೊಸ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಪ್ರೇಮಿಗಳಿಗೆ ಮನಸ್ಸಿನಲ್ಲಿರುವುದನ್ನು ಹೇಳಿಕೊಳ್ಳಲು ಅವಕಾಶ ಸಿಗಲಿದೆ. ಉದ್ದೇಶಿತ ಕೆಲಸಗಳಿಗೆ ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು.

ಕನ್ಯಾ: ಸಕಾಲದಲ್ಲಿ ಸನ್ಮಿತ್ರರ ಸಹಾಯ ದೊರೆಯುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ತುಲಾ: ನಿಮ್ಮ ಕಾರ್ಯಸಾಧನೆಗಾಗಿ ವಾಕ್ಚತುರತೆಯಿಂದ ವ್ಯವಹರಿಸಬೇಕು. ಹೊಸದಾಗಿ ಉದ್ದಿಮೆ ಆರಂಭಿಸಲು ಇದು ಸಕಾಲ. ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಉಂಟಾದೀತು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಮಕ್ಕಳ ವಿಚಾರದಲ್ಲಿ ಹೊಸ ನಿರ್ಧಾರಗಳನ್ನು ಕೈಗೊಳ್ಳಲಿದ್ದೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆಯಿದ್ದು, ಖರ್ಚು ವೆಚ್ಚಗಳು ಹೆಚ್ಚಾದೀತು. ದೂರದ ವ್ಯವಹಾರಗಳಿಂದ ಆದಾಯ ವೃದ್ಧಿಯಾಗಲಿದೆ.

ಧನು: ದೈವಾನುಗ್ರಹದಿಂದ ಇಂದು ನೀವು ಕೈಗೊಳ್ಳಲಿರುವ ಕಾರ್ಯಗಳು ಸಫಲವಾಗಲಿದೆ. ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಮಕರ: ನಿಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸುವ ಪರಿಸ್ಥಿತಿ ಬರಬಹುದು. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಲಿದೆ. ಸ್ವ ಸಾಮರ್ಥ್ಯದಿಂದ ಏಳಿಗೆ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಸರಕಾರೀ ಉದ್ಯೋಗಸ್ಥರಿಗೆ ಉನ್ನತ ಸ್ಥಾನ ಮಾನದ ಯೋಗ. ಆರ್ಥಿಕವಾಗಿ ಬಲ ವರ್ಧನೆಯಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಪ್ರತಿ ಕಂಡುಬರಲಿದೆ. ಮಹಿಳೆಯರಿಗೆ ಮಕ್ಕಳಿಂದ ಸಂತೋಷ ಸಿಗುವುದು.

ಮೀನ: ಏನೇ ತಾಪತ್ರಯಗಳಿದ್ದರೂ ನಿಮ್ಮ ಕಾರ್ಯಸಾಧನೆ ಮಾಡಲು ಪ್ರಯತ್ನ ಮುಂದುವರಿಸಲಿದ್ದೀರಿ. ಕೋರ್ಟು ಕಚೇರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಭಾಸ್ ಮದುವೆಯಾಗದೇ ಇರಲು ಅವರ ಸ್ನೇಹಿತನೇ ಕಾರಣ?