Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 27 ಆಗಸ್ಟ್ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನೂತನ ಮಿತ್ರರ ಸಮಾಗಮ ನಡೆಯಲಿದೆ. ಉದ್ಯಮಿಗಳಿಗೆ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗಲಿವೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಷಭ: ವೈವಾಹಿಕ ವಿಚಾರದಲ್ಲಿ ಹಿರಿಯರ ಅಭಿಪ್ರಾಯಗಳಿಗೆ ಬೆಲೆ ಕೊಡಿ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಏಳಿಗೆ ಕಂಡುಬರಲಿದೆ. ಪರ ನಿಂದನೆ ಮಾಡಲು ಹೋಗಬೇಡಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವ್ಯಾಪಾರಿಗಳಿಗೆ ಉನ್ನತಿಯ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ದಿನಂಪ್ರತಿ ಕೆಲಸಗಳಿಗೆ ಅಡ್ಡಿ ಎದುರಾದೀತು. ಕೌಟುಂಬಿಕವಾಗಿ ಕೆಲವೊಂದು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡರೂ ನಿರೀಕ್ಷಿಸಿದ ಯಶಸ್ಸು ಸಿಗದೇ ಬೇಸರವಾದೀತು. ಸನ್ಮಿತ್ರರ ಸಹಕಾರದಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಸಹೋದರಾದಿ ಸಂಬಂಧಿಗಳೊಂದಿಗಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲಿದ್ದೀರಿ.  ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ವೃಶ್ಚಿಕ: ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವುದರಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಪಾಲುದಾರಿಕಾ ವ್ಯವಹಾರದಲ್ಲಿ ಹೊಂದಾಣಿಕೆ ಸಮಸ್ಯೆಯಾದೀತು. ಮಾತಿನ ಮೇಲೆ ನಿಗಾ ಇರಲಿ. ಪ್ರೀತಿ ಪಾತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಇಷ್ಟ ಭೋಜನ ಮಾಡಲಿದ್ದೀರಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಮಕರ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಕುಂಭ: ಬಹಳ ದಿನಗಳ ನಂತರ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ನಿಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಇದು ಸಕಾಲ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಕಷ್ಟಪಟ್ಟು ದುಡಿದ ಹಣವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡ ತೃಪ್ತಿ ನಿಮ್ಮದಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಅನಗತ್ಯ ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ