Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 28 ಆಗಸ್ಟ್ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಯಾರದ್ದೋ ಬಲವಂತಕ್ಕೆ ನಿಮ್ಮ ನಿರ್ಧಾರಗಳಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಿಲ್ಲ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳಿಂದ ಪಾರಾಗಲಿದ್ದೀರಿ.

ವೃಷಭ: ಸಂಗಾತಿಯ ಆಯ್ಕೆ ವಿಚಾರದಲ್ಲಿ ಬೇರೆಯವರ ಸಲಹೆಗಳಿಗೆ ಕಿವಿಗೊಡಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವ ಹಂಬಲವಾಗಲಿದೆ. ವ್ಯಾಪಾರಿಗಳಿಗೆ ಹಣಕಾಸಿನ ವಿಚಾರದಲ್ಲಿ ಸಂಕಷ್ಟಗಳು ಎದುರಾದೀತು. ತಾಳ್ಮೆಯಿರಲಿ.

ಮಿಥುನ: ನಿಮ್ಮ ವೈಯಕ್ತಿಕ ಜೀವನದಲ್ಲಿ ಏಳಿಗೆ ಕಂಡುಬರಲಿದೆ. ಕೌಟುಂಬಿಕವಾಗಿ ನಿಮ್ಮ ಕೆಲಸಗಳಿಗೆ ಇತರರ ಸಹಾಯ, ಸಹಕಾರ ಕಂಡುಬರುವುದು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ಮಹಿಳೆಯರಿಗೆ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ.

ಸಿಂಹ: ಮನೆಯಲ್ಲಿ ನಡೆಯುವ ಆಗು ಹೋಗುಗಳಿಗೆ ಹೊಣೆಗಾರರಾಗಬೇಕಾಗುತ್ತದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕನ್ಯಾ: ನಿರೀಕ್ಷಿತ ಸಮಯದಲ್ಲಿ ಧನಾದಾಯ ವೃದ್ಧಿಯಾಗಲಿದ್ದು, ಅಂದುಕೊಂಡ ಕೆಲಸಗಳಿಗೆ ಯಾವುದೇ ಸಮಸ್ಯೆಯಾಗದು. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ.

ತುಲಾ: ವಿಶೇಷ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಹೊಸ ಜನರ ಸ್ನೇಹ ಸಂಪಾದಿಸಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ವೃಶ್ಚಿಕ: ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಯೋಗ ನಿಮ್ಮದಾಗುವುದು. ಅತಿಥಿಗಳ ಆಗಮನವಾಗಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಅನಗತ್ಯ ಚಿಂತೆ ಬೇಡ.

ಧನು: ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಿ. ಪಾಲುದಾರಿಕೆ ವ್ಯವಹಾರಗಳಿಗೆ ಬಂಡವಾಳ ಹಾಕಲಿದ್ದೀರಿ. ಹಣಕಾಸಿನ ಸ್ಥಿತಿಗತಿ ಸುಧಾರಣೆಯಾಗಲಿದೆ. ಚಿಂತೆ ಬೇಡ.

ಮಕರ: ಮಕ್ಕಳ ಭವಿಷ್ಯದ ಬಗ್ಗೆ ಹೊಸ ಯೋಜನೆ ಹಾಕಬೇಕಾಗುತ್ತದೆ. ದಾಂಪತ್ಯದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು.

ಕುಂಭ: ಕಾರ್ಯಕ್ಷೇತ್ರದಲ್ಲಿ ನಿಮಗೆ ಎದುರಾಳಿಯಾಗಿದ್ದವರಿಂದ ಸೋಲಿನ ಸಾಧ್ಯತೆ. ಯಾವುದೇ ಕಾರಣಕ್ಕೂ ಪರಿಶ್ರಮ ಹಾಕುವುದನ್ನು ಬಿಡಬೇಡಿ. ಮಕ್ಕಳಿಂದ ನಿಮ್ಮ ಸಂತೋಷ ವೃದ್ಧಿಯಾಗುವುದು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಪರರ ಕಷ್ಟಗಳಿಗೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ನೂತನ ದಂಪತಿಗೆ ಸುಂದರ ಕ್ಷಣ ಕಳೆಯುವ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಕಿರು ಓಡಾಟ ನಡೆಸುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ